Saturday, 14th December 2024

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಆರ್.ಅಶೋಕ್ ಭೇಟಿ

ಬೆಳ್ತಂಗಡಿ: ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹಗ್ಗಡೆ ಅವರನ್ನು ಕುಟುಂಬ ಸಮೇತರಾಗಿ ಭೇಟಿ ನೀಡಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ತಹಸೀಲ್ದಾರ್ ಮಹೇಶ್ ಜೆ., ಡಾ.ಹೆಗ್ಗಡೆ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಮತ್ತಿತರರು ಉಪಸ್ಥಿತರಿದ್ದರು.

ಸಚಿವ ಆರ್.ಅಶೋಕ್ ಅವರು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ನಡೆಸಲಿರುವರು. ಈವೇಳೆ ಸಚಿವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.