ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಶಾಸಕನಿಗೆ (MLA Munirathna) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದರಿಂದ ಸುಮಾರು 1 ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮುನಿರತ್ನಗೆ ಬಿಡುಗಡೆ ಭಾಗ್ಯ ಲಭಿಸಿದೆ.
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಅ.5ರಂದು ನ್ಯಾಯಾಂಗ ಬಂಧನ ಅವಧಿಯನ್ನು 14 ದಿನ ವಿಸ್ತರಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿತ್ತು. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು. ಇದೀಗ ಈ ಪ್ರಕರಣದಲ್ಲಿ ಅವರಿಗೆ ಬೇಲ್ ಮಂಜೂರಾಗಿದೆ.
ಏನಿದು ಪ್ರಕರಣ?
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ | Islamist Attack: ಪತ್ನಿ ವಿಧವೆ, ಅಪ್ಪ ಅಸ್ವಸ್ಥ; ಕೋಮು ದಳ್ಳುರಿಯಲ್ಲಿ ಮೃತಪಟ್ಟ ರಾಮ್ ಗೋಪಾಲ್ ಮಿಶ್ರಾ ಕುಟುಂಬದ ಪರಿಸ್ಥಿತಿ ಶೋಚನೀಯ
ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿತ್ತು. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿರುವುದಾಗಿ ಡಿವೈಎಸ್ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು.