Saturday, 14th December 2024

ಮೋದಿ ಕರ್ನಾಟಕ ಪ್ರವಾಸ ಆರಂಭ, ಕೆಲವೇ ಕ್ಷಣಗಳಲ್ಲಿ ಶಿವಮೊಗ್ಗ ಪ್ರವೇಶ

ಶಿವಮೊಗ್ಗ: ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಅವರು ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ಎದುರಿರುವ ಕರ್ನಾಟಕ ರಾಜ್ಯಕ್ಕೆ ಫೆಬ್ರವರಿ ತಿಂಗಳಿನಲ್ಲಿ 3ನೇ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ.

ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 27ರಂದು ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ ಮತ್ತು ಇತರೆ ಕಾಮಗಾರಿ ಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನದ ಬಳಿಕ ಬೆಳಗಾವಿಗೆ ತೆರಳಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದ ಆವರಣದಲ್ಲಿ ಮಾತ್ರ ನರೇಂದ್ರ ಮೋದಿ ಕಾರ್ಯಕ್ರಮ ನಡೆಯಲಿದೆ. ಶಿವಮೊಗ್ಗ ನಗರದ ಬೇರೆ ಯಾವ ಪ್ರದೇಶಗಳಲ್ಲಿಯೂ ಕಾರ್ಯಕ್ರಮಗಳಿಲ್ಲ.

ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ಎರಡು ಹಂತದ ತಪಾಸಣೆ ಇರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.