Monday, 18th November 2024

Money laundering: ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರಿ ಅಕ್ರಮ; ಸಿಇಒ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ವಾಲ್ಮೀಕಿ ಹಗರಣ, ಮುಡಾ ಹಗರಣ ಬೆನ್ನಲ್ಲೇ ರಾಜ್ಯದಲ್ಲಿ ಇದೀಗ ಮತ್ತೊಂದು ಹಗರಣ ಭಾರಿ ಹಗರಣ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ (Money laundering) ಬರೋಬ್ಬರಿ 19.34 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿ ಪ್ರಭಾರ ಸಿಇಒ ಸೇರಿ 6 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸಹಕಾರ ಸಚಿವ ಕೆಎನ್​ ರಾಜಣ್ಣ ಅವರು ಅ.9ರಂದು ಸಭೆ ನಡೆಸಿದ ವೇಳೆ ಈ ಅಕ್ರಮ ಬೆಳಕಿಗೆ ಬಂದಿದೆ. 2017ರಿಂದ 2023ರ ವರೆಗೆ ಸೊಸೈಟಿಯಲ್ಲಿ ಎಫ್‌ಡಿ ರೂಪದಲ್ಲಿದ್ದ 19.34 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಂದಿದೆ.

ಸೊಸೈಟಿ ಅಧ್ಯಕ್ಷ ರಾಜು ಎಂಬುವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಭಾರ ಸಿಇಒ ಆಶಾಲತಾ, ಅವರ ಪತಿ ಸೋಮಶೇಖರ, ಬಿಡಿಸಿಸಿ ಅಧ್ಯಕ್ಷ, ಬ್ಯಾಂಕ್ ಮ್ಯಾನೇಜರ್, ಆಡಿಟರ್ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Dinesh Gundurao: ನೈತಿಕ ಹೊಣೆ ಹೊತ್ತು ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕು: ದಿನೇಶ್ ಗುಂಡೂರಾವ್ ಆಗ್ರಹ

2017 ರಿಂದ 2023ರ ವರೆಗೆ ಸೊಸೈಟಿಯಲ್ಲಿ ಎಫ್.ಡಿ. ರೂಪದಲ್ಲಿದ್ದ 19.34 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಅನೇಕರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ನಂತರ ಅಕ್ರಮ ಮುಚ್ಚಿಡಲು 101 ಎಫ್.ಡಿ. ಖಾತೆಗಳ ನಕಲಿ ಠೇವಣಿ ಬಾಂಡ್ ಸೃಷ್ಟಿಸಲಾಗಿದೆ. ಅಧ್ಯಕ್ಷರ ಸಹಿಯನ್ನು ಕೂಡ ನಕಲಿ ಮಾಡಲಾಗಿದೆ. ಈ ಬಗ್ಗೆ ಸಚಿವರ ಗಮನಕ್ಕೆ ಬಂದು ಪ್ರಶ್ನಿಸಿದಾಗ ಸೊಸೈಟಿ ಹಣವನ್ನು ಅಪೆಕ್ಸ್ ಬ್ಯಾಂಕಿನಲ್ಲಿ, ಬಿಡಿಸಿಸಿ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿರುವುದಾಗಿ ತಿಳಿಸಿದ್ದಾರೆ. ಆದರೆ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ವರ್ಗಾವಣೆ ನಡೆಸಿರುವುದು, ನಕಲಿ ಠೇವಣಿ ಬಾಂಡ್‌ಗಳ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.