ಚಂದ್ರ ಗ್ರಹಣ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.8ರಂದು ಯಾವುದೇ ಕಾರ್ಯಕ್ರಮ ನೆರವೇರುವುದಿಲ್ಲ. ಅಲ್ಲದೇ ಭೋಜನ ಪ್ರಸಾದ ವಿತರಣೆ ಕೂಡ ಇರುವು ದಿಲ್ಲ.
ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9 ರಿಂದ 11:30ರವರೆಗೆ ಭಕ್ತರಿಗೆ ದೇವರ ದರ್ಶನ ಅವಕಾಶ ಕಲ್ಪಿಸಲಾಗಿದೆ.
ಚಂದ್ರಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲೂ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಆಗಲಿದೆ. ಮಧ್ಯಾಹ್ನ 1:30ರಿಂದ ರಾತ್ರಿ 7ರತನಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1:30ರ ವರೆಗೆ ಮಾತ್ರ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7 ಗಂಟೆಯ ನಂತರ ಭೋಜನ ವ್ಯವಸ್ಥೆ ಮುಂದುವರಿಯಲಿದೆ ಎಂದು ದೇವಸ್ಥಾನ ಪ್ರಕಟಣೆ ತಿಳಿಸಿದೆ.