Saturday, 23rd November 2024

MS Thimmappa: ಬೆಂಗಳೂರು ವಿವಿ ಮಾಜಿ ಉಪಕುಲಪತಿ ಎಂಎಸ್‌ ತಿಮ್ಮಪ್ಪ ಇನ್ನಿಲ್ಲ

MS Thimmappa passed away

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದ ಎಂಎಸ್‌ ತಿಮ್ಮಪ್ಪ (MS Thimmappa passed away) ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ತಮ್ಮ ಮನೆಯ ಬೆಡ್‌ರೂಂನಲ್ಲಿ ನಿನ್ನೆ ಜಾರಿ ಬಿದ್ದು ಮೆದುಳಿಗೆ ಪೆಟ್ಟು ಮಾಡಿಕೊಂಡಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ತಿಮ್ಮಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದವರು. ನೋವಿಜ್ಞಾನದ ಪ್ರೊಫೆಸರ್‌ ಆಗಿದ್ದ ಅವರು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಎರಡು ಅವಧಿಗಳಿಗೆ ಅದರ ರಿಜಿಸ್ಟ್ರಾರ್‌ ಆಗಿ ಸೇವೆ ಸಲ್ಲಿಸಿದ್ದರು. ಮನೋವಿಜ್ಞಾನದ ಪ್ರಾಧ್ಯಾಪಕರಾಗಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಕಲಿಸಿದರು. ಹಲವಾರು ಡಾಕ್ಟರೇಟ್ ಮತ್ತು ಎಂಫಿಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು ಮತ್ತು ಹಲವು ವರ್ಷಗಳ ಕಾಲ ಮನೋವಿಜ್ಞಾನ ವಿಭಾಗವನ್ನು ಮುನ್ನಡೆಸಿದರು.

ಅವರು ತಮ್ಮ ಆಕರ್ಷಕ ವ್ಯಕ್ತಿತ್ವ, ಪರಿಣಾಮಕಾರಿ ಪರಸ್ಪರ ಸಂವಹನಕ್ಕೆ ಹೆಸರುವಾಸಿಯಾಗಿದ್ದರು. ಅವರು 2000 ರಲ್ಲಿ ತಮ್ಮ ಏಕೈಕ ಮಗಳನ್ನು ಮತ್ತು 2007 ರಲ್ಲಿ ಅವರ ಪತ್ನಿಯನ್ನು ಕಳೆದುಕೊಂಡರು. ಅವರ ನಿವೃತ್ತಿಯ ನಂತರ ಏಕಾಂಗಿಯಾಗಿ ವಾಸಿಸುತ್ತಿದ್ದರು. ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಿದ್ದ ಅವರು ಸಾರ್ವಜನಿಕ ಚರ್ಚೆಗಳಲ್ಲಿ ಸಕ್ರಿಯರಾಗಿರುತ್ತಿದ್ದರು.

ಇದನ್ನೂ ಓದಿ: Road Accident: ಆಟವಾಡುತ್ತಿದ್ದಾಗ ಬೈಕ್‌ ಡಿಕ್ಕಿಯಾಗಿ 8 ವರ್ಷದ ಬಾಲಕ ಸಾವು