Thursday, 12th December 2024

ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ

ದೇವನಹಳ್ಳಿ : ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದು, 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ.

ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರ ಜೊತೆ ರ್ಯಾಲಿ ನಡೆಸಿದ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಎಂಟಿಬಿ ನಾಗರಾಜ್ ಈ ಬಾರಿ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ.

ಕಳೆದ ಬಾರಿಯ ಚುನಾವಣೆಯ ವೇಳೆ 1015 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದರು. ನಾಲ್ಕು ವರ್ಷದಲ್ಲಿ 495 ಕೋಟಿ ರೂ ಆಸ್ತಿ ಹೆಚ್ಚಳವಾಗಿದೆ.