ಪಕ್ಷವನ್ನು ಸದೃಢವಾಗಿ ಬೆಳೆಸುವುದರಲ್ಲಿ ಚಂದ್ರುರವರು ಮಹತ್ವದ ಪಾತ್ರ ವಹಿಸುವ ದೃಢ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಚಂದ್ರು ಮಾತನಾಡಿ, ದೆಹಲಿ ಹಾಗೂ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರಗಳು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಪಕ್ಷವು ಸ್ವಚ್ಛ ರಾಜಕೀಯ ಹಾಗೂ ಪ್ರಾಮಾಣಿಕ ಆಡಳಿತ ನೀಡುತ್ತಿದೆ” ಎಂದರು.
ಗೌರಿಬಿದನೂರು ಕ್ಷೇತ್ರದ ಮಾಜಿ ಶಾಸಕ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಜೂನ್‌ನಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿ ದ್ದರು.
ಬಿಬಿಎಂಪಿಯ ಚುನಾವಣೆ ಕೆಲವೇ ತಿಂಗಳಲ್ಲಿ ಎದುರಾಗಲಿದೆ. 2023ರಲ್ಲಿ ರಾಜ್ಯ ವಿಧಾನಸಭೆಯ ಚುನಾವಣೆಯು ಎದುರಾ ಗಲಿದೆ. ಇಂತಹ ಸಂದರ್ಭದಲ್ಲಿ ಎಎಪಿಯಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.