Wednesday, 11th December 2024

ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಅವಳಿ ನಗರಗಳಾದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಈಗಾಗಲೇ ಘೋಷಣೆ ಮಾಡಿದೆ.

ಮೂರು ಮಹಾನಗರ ಪಾಲಿಕೆಯಲ್ಲಿ ಇಂದಿನಿಂದ (ಆಗಸ್ಟ್ 16) ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಆ.23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾ ಗಿದ್ದು, ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಕಳೆದ ಎರಡು ವರ್ಷಗಳಿಂದ ನಗರ ಪಾಲಿಕೆ ಚುನಾವಣೆಗಳು ನೆನೆಗುದಿಗೆ ಬಿದ್ದಿದ್ದವು. ಹುಬ್ಬಳ್ಳಿ- ಧಾರವಾಡದ 82 ವಾರ್ಡ್​ಗಳಲ್ಲಿ ಪಾಲಿಕೆ ಚುನಾವಣೆ ನಡೆಯು ತ್ತಿದ್ದು, ನಾಮಪತ್ರ ಸಲ್ಲಿಕೆಗೆ ಆ.23 ಕೊನೆಯ ದಿನವಾಗಿದೆ. ಅ.24 ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ಹಿಂದೆ ತೆಗೆದುಕೊಳ್ಳಲು ಆ.26 ಕೊನೆ ದಿನವಾಗಿದೆ. ಆಗಸ್ಟ್ 16ರಿಂದ ಸೆಪ್ಟೆಂಬರ್ 6ರವರೆಗೆ ಮೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಹಿತೆ ಜಾರಿಯಾಗುತ್ತದೆ.

ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆಗೆ ಸುಮಾರು 837 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವಿಎಂ ಮತ ಯಂತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯುತ್ತದೆ. 100 ಜನರಿಗೆ ಮಾತ್ರ ಬಹಿರಂಗ ಪ್ರಚಾರ ಮಾಡಲು ಅವಕಾಶವಿರುತ್ತದೆ.

ಚುನಾವಣೆ ನಡೆಯುವ ಮಹಾನಗರ ಪಾಲಿಕೆಗಳು

1. ಬೆಳಗಾವಿ ಮಹಾನಗರ ಪಾಲಿಕೆ- 58 ವಾರ್ಡ್‌ಗಳು

2. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ- 83 ವಾರ್ಡ್‌ಗಳು

3. ಕಲಬುರಗಿ ಮಹಾನಗರ ಪಾಲಿಕೆ- 55 ವಾರ್ಡ್‌ಗಳು