Sunday, 17th November 2024

Munirathna Case: ರೇಪ್ ಕೇಸ್‌ನಲ್ಲಿ ಶಾಸಕ ಮುನಿರತ್ನ ಇನ್ನೂ 14 ದಿನ ಅಂದರ್‌

MLA Munirathna

ಬೆಂಗಳೂರು: ಅತ್ಯಾಚಾರ ಆರೋಪ (Physical Abuse) ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ (BJP MLA Munirathan Case) ಅವರ ನ್ಯಾಯಾಂಗ ಬಂಧನ (Judicial Custody) ಅವಧಿಯನ್ನು ಮತ್ತೆ ಕೋರ್ಟ್ ವಿಸ್ತರಿಸಿದೆ. ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ಅಂದರೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು. ಪೊಲೀಸರು ಸೆ.21ರಂದು ಕೋರ್ಟ್​ಗೆ ಹಾಜರುಪಡಿಸಿದ್ದರು. ಈ ವೇಳೆ ಅವರಿಗೆ ಅ. 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಏನಿದು ಪ್ರಕರಣ?

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್​ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿತ್ತು. ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್​ ಕುಮಾರ್​, ಕಿರಣ್​​, ಲೋಹಿತ್​​, ಮಂಜುನಾಥ್​, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಖಾಸಗಿ ರೆಸಾರ್ಟ್​ನಲ್ಲಿ ಅತ್ಯಾಚಾರ ಮಾಡಿರುವುದಾಗಿ ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Laxmi Hebbalkar: ಮಾಡಿದ್ದುಣ್ಣೋ ಮಾರಾಯ; ಮುನಿರತ್ನ ಬಂಧನದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಲೇವಡಿ