Thursday, 12th December 2024

Munirathna: ಬಿಜೆಪಿ ಶಾಸಕ ಮುನಿರತ್ನ ಮೇಲೆ ಕೊಲೆ ಬೆದರಿಕೆ, ಜಾತಿನಿಂದನೆ ಎಫ್‌ಐಆರ್

Munirathna

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ (Munirathna) ವಿರುದ್ದ ಎರಡು ಪೊಲೀಸ್‌ ದೂರು ದಾಖಲು ಮಾಡಲಾಗಿದೆ. ಒಂದು ಕೊಲೆ ಬೆದರಿಕೆ (Murder Attempt) ಹಾಗೂ ಇನ್ನೊಂದು ಜಾತಿ ನಿಂದನೆ (Atrocity) ದೂರುಗಳಾಗಿವೆ.

ಕಸ ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಲಂಚ ನೀಡುವಂತೆ ಶಾಸಕ ಮುನಿರತ್ನ ಒತ್ತಾಯಿಸಿದ್ದಾರೆ. ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂಬವರು ದೂರು ನೀಡಿದ್ದಾರೆ.

ಇನ್ನೊಂದು ಜಾತಿನಿಂದನೆ ಕಾಯಿದೆಯಡಿ ದೂರು ಆಗಿದ್ದು, ವೈಯಾಲಿಕಾವಲ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

Road Accident: ಬಸ್ – ರಿಕ್ಷಾ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ಖಾಸಗಿ ಸಾರಿಗೆ ಬಸ್ ಆಟೊಗೆ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ.

ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಚಿಕ್ಕಮಗಳೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು ಗೇಟ್ ಎಂಬಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಆಟೊಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಅಟೊ ನಜ್ಜುಗುಜ್ಜಾಗಿದ್ದು ಆಟೊ ಚಾಲಕ ಚಂದ್ರಶೇಖರ್ ಹಾಗು ಪ್ರಯಾಣಿಕ ರಾಘವೇಂದ್ರ ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bangalore Hit and Run Case: ಭೀಕರ ಅಪಘಾತ; ಹಿಟ್‌ ಆ್ಯಂಡ್‌ ರನ್‌ಗೆ ಮೂವರು ವಿದ್ಯಾರ್ಥಿಗಳು ಬಲಿ