Wednesday, 11th December 2024

Murder Case: ತಲೆಗೆ ಗುಂಡು ತೂರಿಸಿ ಗ್ರಾಮ ಪಂಚಾಯತ್‌ ಮಾಜಿ ಸದಸ್ಯನ ಹತ್ಯೆ

kalaburagi news murder case

ಕಲಬುರಗಿ: ತಲೆಗೇ ಗುಂಡು ಹಾರಿಸಿ (firing) ಗ್ರಾಮ ಪಂಚಾಯಿತಿ (Gram Panchayat) ಮಾಜಿ ಸದಸ್ಯನನ್ನು ಕೊಲೆ (Murder Case) ಮಾಡಿರುವ ಘಟನೆ ಕಲಬುರಗಿ (Kalaburagi News) ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ. ಪಡಸಾವಳಗಿ ಗ್ರಾಮದ ವಿಶ್ವನಾಥ್​ ಜಮಾದಾರ್ ಕೊಲೆಯಾದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ.

ವಿಶ್ವನಾಥ್​​​ ಜಮಾದಾರ್ ಶುಕ್ರವಾರ ಬೆಳಗ್ಗೆ ಮಗನನ್ನು ಶಾಲೆಯ ಬಳಿ ಬಿಟ್ಟು ಜಿಡಗಾ ಕ್ರಾಸ್ ಬಳಿ ಬೈಕ್ ಮೇಲೆ ಬರುತ್ತಿದ್ದಾಗ, ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಿಶ್ವನಾಥ್​ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾರೆ. ವಿಶ್ವನಾಥ್​ ಅವರ ತಲೆಗೆ ಮೂರು ಗುಂಡು ಬಿದ್ದಿವೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಿಶ್ವನಾಥ್​ ಅವರನ್ನು ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಶ್ವನಾಥ್‌ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದಿದ್ದು, ವಿಚಾರ ತಿಳಿಯುತ್ತಿದ್ದಂತೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಶ್ವನಾಥ್‌ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆಳಂದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ. ಆಳಂದ ತಾಲೂಕಿನ ಕೋಲಿ ಸಮಾಜದ ಮುಖಂಡ ವಿಶ್ವನಾಥ್​ ಭೀಕರ ಹತ್ಯೆಯಿಂದ ತಾಲೂಕಿನಲ್ಲಿ ಆತಂಕ ಹಾಗೂ ಆಕ್ರೋಶ ಮಡುಗಟ್ಟಿದೆ.

Road Accident: ಬಸ್ – ರಿಕ್ಷಾ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ಖಾಸಗಿ ಸಾರಿಗೆ ಬಸ್ ಆಟೊಗೆ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ.

ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಚಿಕ್ಕಮಗಳೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು ಗೇಟ್ ಎಂಬಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಆಟೊಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಅಟೊ ನಜ್ಜುಗುಜ್ಜಾಗಿದ್ದು ಆಟೊ ಚಾಲಕ ಚಂದ್ರಶೇಖರ್ ಹಾಗು ಪ್ರಯಾಣಿಕ ರಾಘವೇಂದ್ರ ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Munirathna: ಬಿಜೆಪಿ ಶಾಸಕ ಮುನಿರತ್ನ ಮೇಲೆ ಕೊಲೆ ಬೆದರಿಕೆ, ಜಾತಿನಿಂದನೆ ಎಫ್‌ಐಆರ್