Thursday, 21st November 2024

Murder Case: ಶೀಲ ಶಂಕಿಸಿ ಪತ್ನಿಯನ್ನು ಕೊಂದ ಪತಿ, ತಾನೂ ಕತ್ತು ಸೀಳಿಕೊಂಡ

murder case

ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ವಿಕಾರಿ ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿ (Murder Case) ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ (Bengaluru Crime News) ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚೆಲ್ಲಘಟ್ಟ ನಿವಾಸಿ ಸಂಗೀತಾ(30) ಹತ್ಯೆಯಾದ ಮಹಿಳೆ. ಆಕೆಯ ಪತಿ ನಾಗರಾಜ್ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ರಕ್ತಸ್ರಾವಕ್ಕೀಡಾದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರು ವರ್ಷಗಳ ಹಿಂದೆ ತಮಿಳುನಾಡು ಮೂಲದ ನಾಗರಾಜನನ್ನು ಸಂಗೀತಾ ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಮಗುವಿದೆ. ಸಂಗೀತಾ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು, ನಾಗರಾಜ ಸೊಪ್ಪಿನ ವ್ಯಾಪಾರ ಮಾಡುತ್ತಿದ್ದರು.

ಮಂಗಳವಾರ ರಾತ್ರಿ ದಂಪತಿ ಕುಳ್ಳಪ್ಪ ಗಾರ್ಡನ್ ನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿದ್ದ ನಾಗರಾಜ ಪತ್ನಿ ಸಂಗೀತಾ ಜೊತೆಗೆ ಶೀಲದ ವಿಚಾರವಾಗಿ ಜಗಳ ತೆಗೆದು ಹಲ್ಲೆ ಮಾಡಿ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ನಂತರ ತಾನೂ ಹೊತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸ್ಥಳೀಯರು ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming: ಮುಂಡರಗಿಯಲ್ಲಿ ಘೋರ ಘಟನೆ; ಮೂವರು ಮಕ್ಕಳನ್ನು ನದಿಗೆ ಎಸೆದು ತಂದೆ ಆತ್ಮಹತ್ಯೆ