Thursday, 21st November 2024

Murder Case: ಹಳೇ ವೈಷಮ್ಯ; ಶಹಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

Murder Case

ಯಾದಗಿರಿ: ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ (Murder Case) ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಾಪಾನಾಯ್ಕ್ ತಾಂಡಾದ ನಿವಾಸಿ ತಿಪ್ಪಣ್ಣ(35) ಕೊಲೆಯಾದ ವ್ಯಕ್ತಿ.

ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ತಿಪ್ಪಣ್ಣ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಎಸ್ಪಿ ಹಾಗೂ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸುದ್ದಿಯನ್ನೂ ಓದಿ | Self Harming: ಗಂಡ, ಅತ್ತೆಯ ಕಾಟಕ್ಕೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಕೋಲಾರದಲ್ಲಿ ಭೀಕರ ಅಪಘಾತ; ಡಿವೈಡರ್ ಮೇಲೆ ನಿಂತಿದ್ದಾಗ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಹೊರವಲಯದ ಪವನ್ ಕಾಲೇಜು ಬಳಿ ದುರಂತ ಸಂಭವಿಸಿದೆ. ಮೃತರನ್ನು ಉತ್ತರ ಭಾರತ ಮೂಲದ ಕಿರಣ್ ಹಾಗೂ ರಜನಿಸಿಂಗ್ ಎಂದು ಗುರುತಿಸಲಾಗಿದೆ.

ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧಗಳಿಗೆ ಕುಮ್ಮಕ್ಕು; ಪಾವಗಡದ ಮೂವರು ಪೊಲೀಸ್ ಪೇದೆಗಳು ಸಸ್ಪೆಂಡ

ತುಮಕೂರು: ಅಪರಾಧ ಪ್ರಕರಣಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆಂಬ ಆರೋಪದಲ್ಲಿ ಪಾವಗಡ ಪೊಲೀಸ್‌ ಠಾಣೆಯ ಮೂರು ಪೊಲೀಸ್‌ ಪೇದೆಗಳು (Police Suspended) ಅಮಾನತುಗೊಂಡಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಮಟ್ಕಾ, ಜೂಜಾಟ ಇನ್ನಿತರ ಪ್ರಕರಣಗಳಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದ್ದರಿಂದ ಮೂವರು ಪೇದೆಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ.

ಪಾವಗಡ ತಾಲೂಕಿನಲ್ಲಿ ಅಪರಾಧ ಕೃತ್ಯಗಳಿಗೆ ಪೊಲೀಸರಿಂದಲೇ ಪ್ರೋತ್ಸಾಹ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅ. 29ರಂದು ಸಂತೋಷ್, ಶ್ರೀಕಾಂತ್ ನಾಯಕ್, ನಟೇಶ್ ಎಂಬ ಪೇದೆಗಳನ್ನು ಸಸ್ಪೆಂಡ್ ಮಾಡಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.