ಮೈಸೂರು: ಎಲ್‌ಐಸಿ ವಿಮೆ ಹಣದ ಆಸೆಗೆ ಸ್ವಂತ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ (Murder Case) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗೆರೋಸಿ ಕಾಲೋನಿಯಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ತಂದೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಕಿರಿಯ ಮಗ ಹೇಳಿದ್ದ. ಹೀಗಾಗಿ ತಂದೆಯ ಸಾವಿನಿಂದ ಮನನೊಂದು ಹಿರಿಯ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಂಡು ಕೊಲೆ ಆರೋಪಿಯಾಗಿದ್ದಾನೆ. ಈತ ತನ್ನ ತಂದೆ ಅಣ್ಣಪ್ಪನ ಹೆಸರಿನಲ್ಲಿ ವಿಮೆ ಮಾಡಿಸಿದ್ದ. ಆ ಹಣವನ್ನು ಲಪಟಾಯಿಸಲು ಸ್ವಂತ ತಂದೆಯನ್ನೆ ಕೊಲೆ ಮಾಡಿದ್ದಾನೆ. ಟಿಬೇಟಿಯನ್ ಕ್ಯಾಂಪ್‌ನಲ್ಲಿ ಕೆಲಸ ಇದೆ ಹೋಗಿ ಎಂದು ಹೇಳಿದ್ದ ಮಗ ಪಾಂಡು ಮಾತನ್ನು ಕೇಳಿ ತಂದೆ ಅಪ್ಪಣ್ಣ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ತಲೆಗೆ ದೊಣ್ಣೆಯಿಂದ ಹೊಡೆದು ಮಗ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಬಿ.ಎಂ.ರಸ್ತೆಯ ಮಂಚದೇವನಹಳ್ಳಿ ಸಮೀಪ ಎಸೆದು, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿದ್ದ. ಆದರೆ ಈ ವಿಷಯ ತಿಳಿಯದೆ ತಂದೆ ಕಳೆದುಕೊಂಡ ದುಃಖದಲ್ಲಿದ್ದ ಆರೋಪಿ ಪಾಂಡು ಅಣ್ಣ ಧರ್ಮ ಎಂಬುವವರು ಕೂಡ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ತಂದೆ ಸಾವನ್ನಪ್ಪಿದ್ದಾರೆ ಎಂದು ಪಾಂಡು ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದನು. ಆದರೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು ಪಾಂಡುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ವಿಮೆ ಹಣಕ್ಕೆ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಈ ಸುದ್ದಿಯನ್ನೂ ಓದಿ | Manmohan Singh: ಶನಿವಾರ ರಾಜ್‌ಘಾಟ್‌ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಕನ್ನಡ ಕಿರುತೆರೆ ನಟ ಚರಿತ್ ಬಾಳಪ್ಪ ಬಂಧನ
ಬೆಂಗಳೂರು: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಕನ್ನಡದ ಕಿರುತೆರೆ ನಟ ಚರಿತ್ ಬಾಳಪ್ಪ (Actor Charith Balappa) ಅವರನ್ನು ಆರ್ಆರ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿ ಹಲವು ಧಾರವಾಹಿಗಳಲ್ಲಿ ಮಾತ್ರವಲ್ಲದೇ ತೆಲುಗಿನ ಅನೇಕ ಸೀರಿಯಲ್‌ಗಳಲ್ಲಿ ನಟಿಸಿ ಗುರುತಿಸಿಕೊಂಡಿರುವ ನಟನ ವಿರುದ್ಧ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಪ್ರೀತಿಸುವೆ ಎಂದು ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ. ಅಲ್ಲದೇ ಸಹಚರರ ಜತೆ ಮನೆಗೆ ನುಗ್ಗಿ ಚರಿತ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಇಷ್ಟೇ ಅಲ್ಲದೆ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೊ, ವಿಡಿಯೊ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ, ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದಿದ್ದಾರೆ. ಡಿವೋರ್ಸ್ ನಂತರವೂ ಅವರು ಮಾಜಿ ಪತ್ನಿಯ ಜತೆ ಕಿರಿಕ್ ಮಾಡಿಕೊಂಡಿದ್ದರು.
2017ರಲ್ಲಿ ನಟಿ ಮಂಜು ಜತೆ ಚರಿತ್ ಬಾಳಪ್ಪ ಅವರಿಗೆ ವಿವಾಹ ಆಗಿತ್ತು. 2022ರ ಬಳಿಕ ಅವರ ಸಂಸಾರದಲ್ಲಿ ಬಿರುಕು ಮೂಡಿತ್ತು. ನಂತರ ಅವರಿಬ್ಬರು ನ್ಯಾಯಾಲಯದಲ್ಲಿ ವಿಚ್ಚೇದನ ಪಡೆದಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ನೀಡಿದ್ದಕ್ಕೆ ಮಾಜಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂದು ಚರಿತ್ ಬಾಳಪ್ಪ ವಿರುದ್ಧ ಈ ಹಿಂದೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.