Sunday, 22nd December 2024

Murdeshwar Beach Tragedy: ಮುರ್ಡೇಶ್ವರದಲ್ಲಿ ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು

Murdeshwar Beach Tragedy

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ಕೋಲಾರ ಮೂಲದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿರುರುವ ಘಟನೆ ಮಂಗಳವಾರ ನಡೆದಿದೆ. ಕೋಲಾರದ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ 40 ಮಕ್ಕಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು (Murdeshwar Beach Tragedy) ಹೋಗಿದ್ದಾರೆ.

9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರವಂತಿ ಮೃತಪಟ್ಟಿದ್ದು, ಆಕೆಯ ಮೃತದೇಹವನ್ನು ಹೊರತೆಗೆಯಲಾಗಿದೆ. ಇನ್ನುಳಿದಂತೆ ಮುಳಬಾಗಲು ತಾಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷಾ, ಹೆಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಅವರ ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಏಳು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದರು. ನೀರಿನಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದ್ದು, ಉಳಿದ ನಾಲ್ವರು ಸಮುದ್ರಪಾಲಾಗಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ.

ಈ ಸುದ್ದಿಯಲ್ಲಿ ಓದಿ | Pushpa 2 Movie: ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಮತ್ತೊಂದು ಅವಘಡ; ಥಿಯೇಟರ್‌ನಲ್ಲಿ ವ್ಯಕ್ತಿಯ ಶವ ಪತ್ತೆ