Saturday, 28th December 2024

Namma Metro: ಹೊಸ ವರ್ಷದ ಸಂಭ್ರಮಕ್ಕೆ ನಮ್ಮ ಮೆಟ್ರೋ ಸಾಥ್;‌ ಡಿ.31ರಂದು ರಾತ್ರಿ 2.40ರವರೆಗೂ ರೈಲು

namma metro

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru news) ಜನತೆ ಹೊಸ ವರ್ಷಾಚರಣೆಗೆ (New Year celebration) ಸಿದ್ದರಾಗಿದ್ದಾರೆ. ಇವರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ (BMRCL) ಡಿಸೆಂಬರ್ 31ರಂದು ತಡರಾತ್ರಿ 2.40ರವರೆಗೆ ನಮ್ಮ ಮೆಟ್ರೋ (Namma Metro) ರೈಲು ಸಂಚಾರವನ್ನು ವಿಸ್ತರಿಸಿದೆ.

ಈ ಕುರಿತಂತೆ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಜನವರಿ.1ರ ಮುಂಜಾನೆ 2.40ರವರೆಗೆ ವಿಸ್ತರಿಸಲಾಗಿದೆ. ಎಲ್ಲಾ ಟರ್ಮಿನಲ್‌ಗಳಿಂದ ಮಧ್ಯರಾತ್ರಿ 2 ಗಂಟೆಗೆ ಹಾಗೂ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ 2.40ಕ್ಕೆ ಕೊನೆಯ ರೈಲು ಸಂಚರಿಸಲಿದೆ ಎಂದು ತಿಳಿಸಿದೆ.

ಡಿಸೆಂಬರ್ 31ರಂದು ರಾತ್ರಿ 11 ಗಂಟೆಯಿಂದ ಪ್ರತಿ 10 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿವೆ. ಹೊಸ ವರ್ಷಾಚರಣೆಗಾಗಿ ಎಂಜಿ ರಸ್ತೆಗೆ ಬರುವವರ ಸಂಖ್ಯೆ ಹೆಚ್ಚಾಗುವ ಕಾರಣ ರಾತ್ರಿ 11 ಗಂಟೆಗೆ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಅದರ ಬದಲು ಟ್ರಿನಿಟಿ ವೃತ್ತ ಮತ್ತು ಕಬ್ಬನ್ ಉದ್ಯಾನದ ಮೆಟ್ರೋ ನಿಲ್ದಾಣಗಳಲ್ಲಿ ರೈಲು ಹತ್ತಬಹುದು ಎಂದು ಹೇಳಿದೆ.

ಇದನ್ನೂ ಓದಿ: Bengaluru Drugs: ಬೆಂಗಳೂರಿನಲ್ಲಿ ನ್ಯೂ ಇಯರ್‌ಗೆ ಸರಬರಾಜಾಗುತ್ತಿದ್ದ 24 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ