ಬೆಂಗಳೂರು : ಬೆಂಗಳೂರಿನ (Bengaluru news) ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ಓಡಾಟದಲ್ಲಿ ದಾಖಲೆ ನಿರ್ಮಿಸಿದೆ. ಒಂದೇ ದಿನ ಮೆಟ್ರೋದಲ್ಲಿ ಸಂಚರಿಸುವವರ ಸಂಖ್ಯೆ ಭಾರೀ ಏರಿಕೆ ಕಂಡಿದ್ದು, ಶುಕ್ರವಾರ ಗರಿಷ್ಠ ಪ್ರಮಾಣ ತಲುಪಿದೆ.
ಈ ವಿಷಯದ ಕುರಿತಾಗಿ ಬಿಎಂಆರ್‌ಸಿಎಲ್ ಮಾಹಿತಿಯನ್ನು ಹಂಚಿಕೊಂಡಿದೆ. ʼನಮ್ಮ ಮೆಟ್ರೋ’ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಡಿ. 6ರಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬಿಎಂಆರ್‌ಸಿಎಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ನೀಡಿದೆ.
ನೇರಳೆ ಮಾರ್ಗದಲ್ಲಿ 4,39,616 ಜನ ಪ್ರಯಾಣಿಸಿದ್ದು, ಹಸಿರು ಮಾರ್ಗದಲ್ಲಿ 3,12,248 ಜನ ಪ್ರಯಾಣಿಸಿದ್ದಾರೆ. ಕೆಂಪೇಗೌಡ ನಿಲ್ದಾಣದಿಂದ ಮಾರ್ಗ ಬದಲಿಸುವ ಮೂಲಕ 1,67,617 ಜನ ಪ್ರಯಾಣಿಸಿದ್ದಾರೆ.ಕಳೆದ ಆಗಸ್ಟ್ 14ರಂದು ನಮ್ಮ ಮೆಟ್ರೋದಲ್ಲಿ ಒಂದೇ ದಿನ ಬರೋಬ್ಬರಿ 9.17 ಲಕ್ಷ ಮಂದಿ ಸಂಚರಿಸುವ ಮೂಲಕ ದಾಖಲೆ ಸೃಷ್ಟಿಸಿತ್ತು. ಇದೀಗ ನಮ್ಮ ಮೆಟ್ರೋದಲ್ಲಿ 9.20 ಲಕ್ಷಕ್ಕೂ ಅಧಿಕ ಜನ ಪ್ರಯಾಣಿಸುವ ದಾಖಲೆಯನ್ನು ಮುರಿದಿದೆ.
Bengauru- ayodhya Flight: ಬೆಂಗಳೂರಿನಿಂದ ಅಯೋಧ್ಯೆಗೆ ನೇರ ಇಂಡಿಗೋ ವಿಮಾನ
ಬೆಂಗಳೂರು: ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ ಕಾರ್ಯಾಚರಣೆಯನ್ನು ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ಡಿಸೆಂಬರ್ 31ರಿಂದ ಪ್ರಾರಂಭಿಸಲಿದೆ. ಇದರ ಜೊತೆಗೆ, ಬೆಂಗಳೂರಿನಿಂದ ಗೋರಖ್‌ಪುರಕ್ಕೂ ವಿಮಾನಗಳು ವರ್ಷಾಂತ್ಯದಿಂದ ಪ್ರಾರಂಭವಾಗಲಿವೆ.
ತನ್ನ ದೇಶೀಯ ನೆಟ್‌ವರ್ಕ್ ಅನ್ನು ವಿಸ್ತರಿಸಲು ನಿರ್ಧರಿಸಿರುವ ಇಂಡಿಗೋ ಏರ್‌ಲೈನ್ಸ್, ಡಿಸೆಂಬರ್ 31ರಿಂದ ಬೆಂಗಳೂರು ಮತ್ತು ಅಯೋಧ್ಯೆಯನ್ನು ಸಂಪರ್ಕಿಸುವ ದೈನಂದಿನ ನೇರ ವಿಮಾನಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಏರ್‌ಲೈನ್ ತನ್ನ ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸಲು ಸಜ್ಜಾಗಿದೆ. ಪ್ರವಾಸೋದ್ಯಮ ಮತ್ತು ತೀರ್ಥಯಾತ್ರೆಗಳಿಗಾಗಿ ವಿಮಾನಗಳನ್ನು ಸಾರಿಗೆ ವಿಧಾನವಾಗಿ ಆಯ್ಕೆ ಮಾಡುವಲ್ಲಿ ಗರಿಷ್ಠ ಪ್ರಯಾಣಿಕರನ್ನು ಆಕರ್ಷಿಸಲು ಅನುಕೂಲಕರ ಸಮಯದಲ್ಲಿ ವಿಮಾನಗಳನ್ನು ನಿಗದಿಪಡಿಸಲಾಗುವುದು ಎಂದು ಅದು ಹೇಳಿದೆ.
“ಬೆಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ದೈನಂದಿನ ವಿಮಾನಗಳ ಪ್ರಾರಂಭವು ದೇಶದಲ್ಲಿ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಆಳವಾದ ಆಧ್ಯಾತ್ಮಿಕ ಪ್ರಾಮುಖ್ಯತೆಯ ನಗರವಾದ ಅಯೋಧ್ಯೆಗೆ ಪ್ರವಾಸ ಹೋಗಲು ನಮ್ಮ ಗ್ರಾಹಕರಿಗೆ ಸಮಯೋಚಿತವಾದ ದೈನಂದಿನ ವಿಮಾನಗಳು ನೆರವಾಗಲಿದ್ದು, ಇಂಡಿಗೋದ ವ್ಯಾಪಕ ನೆಟ್‌ವರ್ಕ್ ಅನ್ನು ಮತ್ತಷ್ಟು ಬಲಪಡಿಸಲಿದೆ” ಎಂದು ಇಂಡಿಗೋದ ಜಾಗತಿಕ ಮಾರಾಟದ ಮುಖ್ಯಸ್ಥ ವಿನಯ್ ಮಲ್ಹೋತ್ರಾ ಹೇಳಿದ್ದಾರೆ.
ಆರಂಭಿಕ ಹಂತದಲ್ಲಿ ವಿಮಾನಗಳು ಹಗಲಿನ ಸಮಯದಲ್ಲಿ ಹಾರಾಡಲಿವೆ. ವಿಮಾನ 6E 934 ಬೆಳಿಗ್ಗೆ 11.40ಕ್ಕೆ ಬೆಂಗಳೂರಿನಿಂದ ಹೊರಡಲಿದೆ. ಮಧ್ಯಾಹ್ನ 2.25ಕ್ಕೆ ಅಯೋಧ್ಯೆಗೆ ಆಗಮಿಸಲಿದೆ. ಹಿಂದಿರುಗುವ ಪ್ರಯಾಣದಲ್ಲಿ, 6E 926 ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 2.55 ಕ್ಕೆ ಹೊರಟು ಸಂಜೆ 5.30 ಕ್ಕೆ ಬೆಂಗಳೂರು ತಲುಪುತ್ತದೆ.
ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ 2026ರ ಡಿಸೆಂಬರ್‌ಗೆ