Thursday, 26th December 2024

Nee Nange Allava Movie: ಮನೋಜ್ ಪಿ ನಡಲುಮನೆ ನಿರ್ದೇಶನದ ʼನೀ ನಂಗೆ ಅಲ್ಲವಾʼ ಚಿತ್ರಕ್ಕೆ ನಾಯಕಿಯಾಗಿ ಕಾಶಿಮಾ

Nee Nange Allava Movie

ಬೆಂಗಳೂರು: ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ʼಮ್ಯಾಟ್ನಿʼ ಚಿತ್ರವನ್ನು ನಿರ್ಮಿಸಿದ್ದ ಎಸ್. ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ ʼನೀ ನಂಗೆ ಅಲ್ಲವಾʼ ಚಿತ್ರ (Nee Nange Allava Movie) ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ‌ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದ ಚಿತ್ರತಂಡ, ಈಗ ಚಿತ್ರದ ನಾಯಕಿಯ ಬಗ್ಗೆ ಮಾಹಿತಿ ನೀಡಿದೆ.

ಬೆಡಗಿ ಕಾಶಿಮಾ ʼನೀ ನಂಗೆ ಅಲ್ಲವಾʼ ಚಿತ್ರದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕಿ ಕಾಶಿಮಾ‌ ಅವರಿಗೆ ಚಿತ್ರತಂಡ ಸ್ವಾಗತ ಹೇಳಿದೆ.

ಈ ಸುದ್ದಿಯನ್ನೂ ಓದಿ | Winter Fashion: ಚಳಿಗಾಲದ ಟ್ರಾವೆಲ್ ಫ್ಯಾಷನ್‌ನಲ್ಲಿ ಎಂಟ್ರಿ ಕೊಟ್ಟ ಕಲರ್‌ಫುಲ್ ಉಲ್ಲನ್ ಟೋಪಿಗಳು

ಸೂರಜ್ ಜೋಯಿಸ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ನಾಗೇಂದ್ರ ಉಜ್ಜನಿ ಅವರ ಸಂಕಲನ‌ ಈ ಚಿತ್ರಕ್ಕಿದ್ದು, ಸಂಕ್ರಾಂತಿ ನಂತರ ಚಿತ್ರೀಕರಣ ಆರಂಭವಾಗಲಿದೆ.