Sunday, 15th December 2024

ರಾಜ್ಯದಲ್ಲಿ ನಿಲ್ಲದ ಕರೋನಾ ಅಬ್ಬರ: 3728 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕರೋನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸೋಮವಾರ ಬರೋಬ್ಬರಿ 5279 ಕರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10,20,434ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ 3728 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4,50,759ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ.

ಇಂದು 1856 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9,65,275ಕ್ಕೆ ಏರಿಕೆಯಾಗಿದೆ. 42483 ಸಕ್ರಿಯ ಪ್ರಕರಣಗಳಿವೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily