ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ನಿಯಂತ್ರಣ ನಿಟ್ಟಿನಲ್ಲಿ ಮುಂಜಾ ಗೃತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ರಾಜ್ಯಾದ್ಯಂತ ಡಿ.28ರಿಂದ ಹತ್ತು ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು.
ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಬಹಿರಂಗ ಪಾರ್ಟಿಗಳಿಗೂ ಕಡಿವಾಣ ಹಾಕಲಾಗಿದೆ. ಸಭೆ-ಸಮಾರಂಭಗಳಿಗೆ ಶೇ.50ರಷ್ಟು ಮಾತ್ರ ಅವಕಾಶ ನೀಡಲಾಗಿದೆ.
ಒಮಿಕ್ರಾನ್ ಕೇಸ್ ಹೆಚ್ಚುತ್ತಿದ್ದು, ಈವರೆಗೆ 38 ಜನರಲ್ಲಿ ವೈರಸ್ ಪತ್ತೆಯಾಗಿದೆ. ಈಗಾಗಲೇ ಲಸಿಕೆ ನೀಡಿಕೆಯಲ್ಲಿ ಮೊದಲ ಡೋಸ್ ಶೇ.90ರಷ್ಟು ಜನರಿಗೆ ಹಾಕಲಾಗಿದ್ದು, ಶೇ.75ರಷ್ಟು ಜನರು 2ನೇ ಡೋಸ್ ಪಡೆದುಕೊಂಡಿದ್ದಾರೆ. ಒಮಿಕ್ರಾನ್ ಪ್ರಕರಣ ವೇಗವಾಗಿ ಹರಡುತ್ತಿರುವುದರಿಂದ ಜನರು ನಿರ್ಲಕ್ಷ ಮಾಡದೇ 2ನೇ ಡೋಸ್ ಲಸಿಕೆಯನ್ನು ತಕ್ಷಣ ಪಡೆದುಕೊಳ್ಳಬೇಕು. ಇದರಿಂದ ಮಾತ್ರ ರೋಗನಿರೋಧಕ ಶಕ್ತಿ ಹೆಚ್ಚಳವಾಗಲು ಸಾಧ್ಯ ಎಂದು ಹೇಳಿದರು.