Wednesday, 23rd October 2024

6 ರಿಂದ 9ನೇ ಭೌತಿಕ ತರಗತಿ ಸ್ಥಗಿತ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿ ಯಿಂದ ಪ್ರಸ್ತುತ ನಡೆಯುತ್ತಿರುವ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ತಕ್ಷಣದಿಂದ ನಿಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು(ಪ್ರೌಢ ಶಿಕ್ಷಣ), ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಪರಿಗಣಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಗಳನ್ನು ತಕ್ಷಣದಿಂದ ನಿಲ್ಲಿಸಲು ಸೂಚನೆ ನೀಡಿರುತ್ತಾರೆ.

ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸ್ತುತ ನಡೆಯು ತ್ತಿರುವ ಭೌತಿಕ ತರಗತಿಗಳನ್ನು ತಕ್ಷಣದಿಂದ ನಿಲ್ಲಿಸಲು ತಿಳಿಸಿದೆ.

ಜಿಲ್ಲೆಯಲ್ಲಿ 10ನೇ ತರಗತಿಗಳನ್ನು ಮಾರ್ಗಸೂಚಿಗಳಂತೆ ಭೌತಿಕ, ಆನ್ ಲೈನ್ ವಿಧಾನದಲ್ಲಿ ಮುಂದುವರೆಸುವುದು. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಈ ಕಚೇರಿ ಸುತ್ತೋಲೆಯಲ್ಲಿ ತಿಳಿಸಿರುವ ಮಾರ್ಗಸೂಚಿಗಳಂತೆ ಎಲ್ಲ ಕ್ರಮಗಳನ್ನು ಪಾಲಿಸಿ ನಿಗದಿ ಪಡಿಸಿದ 6 ರಿಂದ 10ನೇ ತರಗತಿಗಳನ್ನು ಭೌತಿಕ, ಆನ್ ಲೈನ್ ವಿಧಾನದಲ್ಲಿ ಮುಂದುವರೆಸುವುದು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily