Thursday, 12th December 2024

ಬಜೆಟ್‌ ಬ್ರೇಕಿಂಗ್‌: ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಇಲ್ಲ, ಕಡಿತವೂ ಇಲ್ಲ

ಬೆಂಗಳೂರು: ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಮಾರಾಟ ತೆರಿಗೆ ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ ಇದೆ. ಇದನ್ನು ಹೊರತುಪಡಿಸಿ ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸಲಾಗಿಲ್ಲ. ಆದರೆ ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡುವುದಿಲ್ಲ ಎಂದು ತಿಳಿಸಿದರು.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಜನರ ಮೇಲೆ ಇನ್ನಷ್ಟು ಹೊರೆಯಾಗಬಾರದು ಎಂದು ತೆರಿಗೆ ಹೆಚ್ಚಿಸದಿರಲು ನಿರ್ಧರಿಸ ಲಾಗಿದೆ ಎಂದೂ ತಿಳಿಸಿದ್ದಾರೆ.