Friday, 13th December 2024

ಬಿಜೆಪಿ ಪಕ್ಷದೊಂದಿಗೆ ವಿಷಯಾಧಾರಿತ ಹೊಂದಾಣಿಕೆ: ಹೆಚ್‌.ಡಿ.ಕೆ

ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್‌ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬುದಾಗಿ ಎದ್ದಿದ್ದಂತ ಊಹಾಪೋಹಗಳಿಗೆ ತೆರೆ ಎಳಿದಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆ ಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ ಎಂದಿದ್ದಾರೆ.