Saturday, 21st September 2024

ಇಂದಿನಿಂದ ಆನ್ ಲೈನ್ ಕ್ಲಾಸ್ ಬಂದ್

ಬೆಂಗಳೂರು : ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಇಎಂಐ ಕಟ್ಟುವುದಕ್ಕೆ ಕಷ್ಟಪಡುತ್ತಿವೆ. ಕನಿಷ್ಠ ಒಂದು ವರ್ಷ ಕಾಲಾವಧಿ ನೀಡಲು ಬ್ಯಾಂಕ್ ಗಳಿಗೆ ನಿರ್ದೇಶನ ನೀಡಬೇಕೆಂದು ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಇಂದಿನಿಂದ ಆನ್ ಲೈನ್ ಕ್ಲಾಸ್ ಬಂದ್ ಮಾಡಲು ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜ.1 ರ ಹೊಸ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ಒಳಗೊಂಡಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕೆ ನಿರ್ಧಾರ ಕೈಗೊಂಡಿದೆ . ಇಂತಹ ಶಾಲಾ – ಕಾಲೇಜು ಆರಂಭದ ಹೊಸ್ತಿಲಲ್ಲಿ ಇರುವ ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲೆಗಳು ಶಾಕ್ ನೀಡಿವೆ.

ಜನವರಿ 1 ರೊಳಗೆ ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಶಾಲೆ ತೆರೆಯುವುದಿಲ್ಲ. ಜನವರಿ 6 ರಿಂದ ಮತ್ತೆ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಸಂಘಟನೆ ವ್ಯಾಪ್ತಿಯಲ್ಲಿ 12,800 ಶಾಲೆಗಳು ನೋಂದಾಯಿಸಿಕೊಂಡಿವೆ. ಈಗಾಗಲೇ ರಾಜ್ಯವ್ಯಾಪ್ತಿ ಪ್ರತಿಭಟನೆ ಮಾಡಿದ್ದೇವೆ. ಇದೀಗ ನಮ್ಮ ಸಮಸ್ಯೆಗಳನ್ನೇ ಈಡೇರಿಸಲಿಲ್ಲವಾದರೆ ಸುಮ್ಮ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.