Sunday, 15th December 2024

ಉಪಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಉಪ ಚುನಾವಣೆಯನ್ನು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗಂಭೀರವಾಗಿ ಪರಿಗಣಿಸಿದ್ದು, ಇನ್ನು ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿಲ್ಲ. ನಾಮಪತ್ರ ಸಲ್ಲಿಸಲು ಅ.8ರವರೆಗೂ ಕಾಲಾವಕಾಶವಿದೆ. ಅ.11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದು ವಾರಿಕೆ ಹಿಂದಕ್ಕೆ ಪಡೆಯಲು ಅ.13ರವರೆಗೂ ಚುನಾವಣಾ ಆಯೋಗ ಕಾಲಾವಕಾಶ ನೀಡಿದೆ.

ಮುಂದಿನ ವಾರದಿಂದ ಚುನಾವಣಾ ಕಾವು ಹೆಚ್ಚಾಗಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ದಲ್ಲಿ ತೊಡಗಲಿದ್ದಾರೆ. ಈಗಾಗಲೇ ಮೂರೂ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಭರದಿಂದ ಸಾಗಿದ್ದು, ಚುನಾವಣಾ ಕಣಕ್ಕಿಳಿಸುವ ಅಭ್ಯರ್ಥಿ ಗಳನ್ನು ಶೀಘ್ರದಲ್ಲೇ ಪ್ರಕಟಸಲಿವೆ.