Thursday, 12th December 2024

ರಾಷ್ಟ್ರ ರಾಜಕಾರಣಕ್ಕೆ ಹೋಗಲು ಆಸಕ್ತಿಯಿಲ್ಲ: ಸಿದ್ದರಾಮಯ್ಯ

ಬೆಂಗಳೂರು : ದೆಹಲಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಲಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರ ರಾಜಕಾರಣಕ್ಕೆ ಹೋಗಲು ಆಸಕ್ತಿಯಿಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರೆಯುತ್ತೇನೆ. ಸೋನಿಯಾ ಗಾಂಧಿ ಭೇಟಿ ಬಳಿಕ ಈ ಬಗ್ಗೆ ಮಾತನಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿದ್ದು, ದೆಹಲಿಗೆ ಆಗಮಿಸುವಂತೆ ಬುಲಾವ್ ನೀಡಿದ್ದಾರೆ. ಈ ಹಿನ್ನೆಲೆ ಇಂದು ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ಸಿದ್ದರಾಮಯ್ಯ ದೆಹಲಿ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.

2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸಂಘಟನೆ ನಿಟ್ಟಿನಲ್ಲಿ ಹಲವು ರಾಜ್ಯಗಳ ಪ್ರಬಲ ನಾಯಕರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆದುಕೊಳ್ಳುವ ನಿಟ್ಟಿನಲ್ಲಿ ಹೈಕಮಾಂಡ್ ಹಲವು ನಾಯಕರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎನ್ನಲಾಗಿದೆ.