Saturday, 23rd November 2024

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ

BSY

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಅಭಿವೃದ್ಧಿ ನಿಗಮ ಸ್ಥಾಪನೆಯ ಕೂಗು ಆರಂಭಗೊಂಡಿದೆ. ಅದೇ ರಾಜ್ಯದಲ್ಲಿ 2ನೇ ಸ್ಥಾನದಲ್ಲಿ ಜನಸಂಖ್ಯೆ ಹೊಂದಿದ್ದೇವೆ. ಒಕ್ಕಲಿಗ ಅಭಿವೃದ್ಧಿ ನಿಗಮ ಕೂಡ ಸ್ಥಾಪನೆ ಮಾಡಿ ಎಂಬುದಾಗಿದೆ.

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ನಂತರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಆದೇಶ ಹೊರ ಬಿದ್ದಿದೆ. ಮರಾಠ ಅಭಿವೃದ್ಧಿ ನಿಗಮಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ, ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ಕೂಡ ನೀಡಿದ್ದಾವೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುದೀಘ ಪತ್ರ ಬರೆದಿರುವ ಕೆ ಆರ್ ನಗರ ಒಕ್ಕಲಿಗರ ಸಂಘದ ಅಧ್ಯಕ್ಷ ಮಿರ್ಲೆ ಅಣ್ಣೇಗೌಡ, ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಜನಾಂಗದವರು 2ನೇ ಸ್ಥಾನದಲ್ಲಿ ಇದ್ದಾರೆ. ಇಂತಹ ಸಮು ದಾಯದ ಅಭಿವೃದ್ಧಿ ಕೂಡ ಆಗಬೇಕಿದೆ. ಹೀಗಾಗಿ ಕೇಂಪೇಗೌಡ ಹೆಸರಿನಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿದ್ದಾರೆ.

ನಿಗಮದ ಸ್ಥಾಪನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಿಎಂ ಯಡಿಯೂರಪ್ಪ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು ಅಚ್ಚರಿ ತಂದಿದೆ. ಜಾತಿಗೊಂದು ನಿಗಮ, ಪ್ರಾಧಿಕಾರ ರಚನೆ ಮಾಡುತ್ತಾ ಹೋದ್ರೆ ಅದಕ್ಕೆ ಮಿತಿಯೇ ಇರೋದಿಲ್ಲ ಎಂಬುದಾಗಿ ಹೇಳಿದ್ದಾರೆ.