Wednesday, 11th December 2024

ಮಾರ್ಚ್ 1ರಿಂದ ಎಲ್ಲ ಕಡತಗಳ ಅನ್ ಲೈನ್ ವ್ಯವಹಾರ ಕಡ್ಡಾಯ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಆನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯವಾಗಿದ್ದು, ಗಡುವಿನ ನಂತರ ಭೌತಿಕ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಿತ್ತು. ಆದರೂ ಕೆಲವು ವಿ.ವಿ.ಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ’ ಎಂದು ಎಚ್ಚರಿಸಿದ್ದಾರೆ.

ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲೋದ್ದೇಶವೇ ವಿಫಲವಾದಂತಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯು ವಂತೆ ಮಾಡಬೇಕೆನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿ.ವಿ.ಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಎನ್‌ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ (ಎನ್‌ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿ ಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ.