Thursday, 21st November 2024

R Ashok: 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್‌ ಮಂಡಳಿಗೆ ಬರೆಯಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ; ಆರ್‌. ಅಶೋಕ್‌ ಆರೋಪ

R Ashok

ಬೆಂಗಳೂರು: ವಕ್ಫ್‌ ಮಂಡಳಿ ಬಡವರ ಭೂಮಿ ಕಬಳಿಸುತ್ತಿರುವುದರಿಂದ ಎಲ್ಲರೂ ಭೀತಿಗೊಳಗಾಗಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಇದರ ನೇತೃತ್ವ ವಹಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು (CM Siddaramaiah) ನೋಟಿಸ್‌ ವಾಪಸ್‌ ಪಡೆಯಲು ಸೂಚಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಮುಖ್ಯ ಕಾರ್ಯದರ್ಶಿ ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | Pralhad Joshi: ಉಪ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ʼಟೋಕನ್ʼ ಮೊರೆ ಹೋಗಿದೆ; ಜೋಶಿ ಆರೋಪ

ಕಾಂಗ್ರೆಸ್‌ ವಕ್ಫ್‌ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ

ಟಿಪ್ಪು ಸುಲ್ತಾನ್‌ ಖಡ್ಗ ಬಳಸಿ ಅಮಾಯಕರನ್ನು ಮತಾಂತರ ಮಾಡಿದ್ದ. ಅದೇ ರೀತಿ ಈಗ ಕಾಂಗ್ರೆಸ್‌ ವಕ್ಫ್‌ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ. ಸರ್‌.ಎಂ. ವಿಶ್ವೇಶ್ವರಯ್ಯ ಅವರು ಓದಿದ ಶಾಲೆಯನ್ನೂ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್‌ ಮಂಡಳಿಗೆ ಬರೆಯಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕಬಳಿಕೆ ಮಾಡಿದ ಭೂಮಿ ವಾಪಸ್‌ ಪಡೆಯಿರಿ ಎಂದು ಹೇಳಿದ್ದಾರೆಯೇ ಹೊರತು, ರೈತರ ಜಮೀನು ಪಡೆಯಲು ಹೇಳಿಲ್ಲ. ಆದರೆ ಮಂಡಳಿಯ ಸದಸ್ಯರು ವಿಧಾನಸೌಧ ನಮ್ಮದು ಎಂದು ಕೂಡ ಹೇಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರವಿದ್ದಾಗ ಕೋಲಾರದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗಿತ್ತು. ಈಗ ಅದರ ಮೇಲೆ ಮಸೀದಿ ಕಟ್ಟಿಸಿ ಕಾಂಪೌಂಡ್‌ ನಿರ್ಮಿಸಲಾಗಿದೆ. ಇಂತಹ ಅಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Aadhar Card update: 10 ವರ್ಷಗಳಿಂದ ಆಧಾರ್​ ಕಾರ್ಡ್ ಅಪ್‌ಡೇಟ್‌ ಮಾಡಿಲ್ವಾ? ಕೊನೆಯ ದಿನ, ವಿವರ ಇಲ್ಲಿದೆ

ರಾಜಕೀಯ ಪ್ರೇರಿತ

ಕಾಂಗ್ರೆಸ್‌ ಸರ್ಕಾರ ಎಲ್ಲಕ್ಕೂ ಎಸ್‌ಐಟಿ ರಚಿಸುತ್ತಿದೆ. ಸಿದ್ದರಾಮಯ್ಯ ಅವರ ಹಗರಣದ ವಿರುದ್ಧ ಕೆಂಪಣ್ಣ ಆಯೋಗ ರಚಿಸಿದ್ದು, ಅದರ ವರದಿ ಬಂದೇ ಇಲ್ಲ. ಕೋವಿಡ್‌ ಸಮಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ಅಧಿಕಾರಿಗಳು ಹೇಳಿದಂತೆ ಖರೀದಿ ಮಾಡಲು ಸೂಚಿಸಿದ್ದಾರೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ, ಇದು ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ. ಖರೀದಿ ಮಾಡುವ ಅಧಿಕಾರ ಮುಖ್ಯಮಂತ್ರಿಗಿಲ್ಲ. ಯಾವ ಕಂಪನಿಯಿಂದ, ಎಲ್ಲಿಂದ ಖರೀದಿ ಮಾಡಬೇಕೆಂದು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಈ ಪ್ರಕರಣ ಸರ್ಕಾರಕ್ಕೆ ತಿರುಗುಬಾಣವಾಗಲಿದೆ ಎಂದರು.