ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂಬು ದಾಗಿ ಹವಾಮಾನ ಇಲಾಖೆ ಮುನ್ಸೂಚಿನೆ ನೀಡಿದೆ. ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ 2 ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಜು.6 ಮತ್ತು 7ರಂದು ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.
ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ.7ರವರೆಗೆ ಭಾರೀ ಮಳೆಯಾಗಲಿದೆ. ಬೀದರ್, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗೋ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿದೆ.
ಶೃಂಗೇರಿ, ಕಳಸ,ಹಾಗೂ ಮೂಡಿಗೆರೆ ತಾಲೂಕು, ಬಾಳೂರು ಹೋಬಳಿ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಲಾಗಿದೆ.