Saturday, 2nd November 2024

50 ಲಕ್ಷ ವೆಚ್ಚದ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ

ಪಾವಗಡ: ಸಾರ್ವಜನಿಕ ಆಸ್ಪತ್ರೆಗೆ ಸರ್ಕಾರದ ಅನುದಾನದಡಿಯಲ್ಲಿ 50 ಲಕ್ಷ ವೆಚ್ಚದ ಆಕ್ಸಿಜನ್ ಉತ್ಪಾದನಾ ಘಟಕವನ್ನು  ಶಾಸಕ ವೆಂಕಟರಮಣಪ್ಪ ಹಾಗೂ ಸಂಸದ ಎ.ನಾರಾಯಣ ಸ್ವಾಮಿ ಉದ್ಘಾಟಿಸಿದರು.
ಶಾಸಕರು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಕೋವಿಡ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ರೋಗಿ ಗಳಿಗೆ ತೊಂದರೆ ಆಗದ ರೀತಿಯಲ್ಲಿ ಎಲ್ಲಾ ತರದ ಕ್ರಮಗಳು ಕೈಗೊಳ್ಳಲು ಸೂಚಿಸಿದ್ದೇನೆ. ಇಂದು ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ವುಳ್ಳ ಆಸ್ಪತ್ರೆಗೆ ಚಾಲನೆ ಮತ್ತು ಪಾವಗಡ ಸರ್ಕಾರಿ ಆಸ್ಪತ್ರೆಗೆ ಐವತ್ತು ಲಕ್ಷ ವೆಚ್ಚದ ಆಕ್ಸಿಜನ್ ಉತ್ಪಾದನೆ ಘಟಕಕ್ಕೆ ಚಾಲನೆ ನೀಡಲಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಯಾರಿಗೂ ತೊಂದರೆ ಅದರೆ ನೇರವಾಗಿ ನನ್ನನ್ನು ಕರೆ ಮಾಡಿ. ಈಗಾಗಲೇ ನಿರ್ಗತಿಕರ ವ್ಯಕ್ತಿಗಳಿಗೆ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಉಚಿತ ಊಟದ ವ್ಯವಸ್ಥೆ ಸಹ ಮಾಡಲಾಗಿದೆ ಎಂದರು.
ಸಂಸದ ಎ.ನಾರಾಯಣ್ ಸ್ವಾಮಿ ಮಾತನಾಡಿ, ಸರ್ಕಾರದಿಂದ ನೀಡಬೇಕಾದ ಮೂಲಸೌಕರ್ಯಗಳು ಸರ್ಕಾರಿ ಆಸ್ಪತ್ರೆಗೆ ಕಲ್ಪಿಸ ಲಾಗುತ್ತಿದೆ. ಯಾವುದೇ ರೀತಿಯಲ್ಲಿ ರೋಗಿಗಳಿಗೆ ತೊಂದರೆ ಆಗಬಾರದು. ರೋಗಿಗಳಲ್ಲಿ ತಾರತಮ್ಯ ಮಾಡದೆ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ಸಲಹೆ ನೀಡಿದರು.
ಈ ವೇಳೆ ಡಿ ಹೆಚ್ ಓ ನಾಗೇಂದ್ರಪ್ಪ, ತಾಲೂಕು ವೈದ್ಯಧಿಕಾರಿ ತಿರುಪತಯ್ಯ.ಬಿಜೆಪಿ ಹಿರಿಯ ಮುಖಂಡ ಡಾ.ವೆಂಕಟ ರಾಮಯ್ಯ, ಬಿಜೆಪಿ ತಾಲೂಕು ಅಧ್ಯಕ್ಷ ರವಿಶಂಕರ್ ನಾಯ್ಕ್ ಇತರರು ಇದ್ದರು.