Sunday, 13th October 2024

Pavagada News: ಸಿಗದ ಆಂಬ್ಯುಲೆನ್ಸ್; ವೃದ್ಧನ ಮೃತ ದೇಹವನ್ನು ಬೈಕ್‌ನಲ್ಲೇ ತೆಗೆದುಕೊಂಡು ಹೋದ ಮಕ್ಕಳು!

Pavagada News

ಪಾವಗಡ: ಮೃತದೇಹವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿದ್ದ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲಿ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಹೃದಯವಿದ್ರಾವಕ ಘಟನೆ ತಾಲೂಕಿನ (Pavagada News) ವೈ.ಎನ್. ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ.

ಈ ಸುದ್ದಿಯನ್ನೂ ಓದಿ | Mpox Virus: ಕೇರಳದಲ್ಲಿ ಮಂಕಿಪಾಕ್ಸ್‌ ಸೋಂಕು ದೃಢ

ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ(80) ಎಂಬ ವೃದ್ದ ವೈ.ಎನ್. ಹೋಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು. ಆದರೆ ಮೃತ ಹೊನ್ನೂರಪ್ಪ ಅವರ ಶವವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ದ್ವಿಚಕ್ರ ವಾಹನದಲ್ಲಿಯೇ ಹೊನ್ನೂರಪ್ಪ ಅವರ ಹಿರಿಯ ಪುತ್ರ ಚಂದ್ರಣ್ಣ ಮತ್ತು ಕಿರಿಯ ಪುತ್ರ ಗೋಪಾಲಪ್ಪ ಊರಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.