ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ಅವರ ನಿಧನಕ್ಕೆ ಚಿತ್ರರಂಗ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಇದೀಗ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಅವರು ಸಂತಾಪ ಸೂಚಿಸಿದ್ದು, ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕನ್ನಡದಲ್ಲೇ ಪವನ್ ಕಲ್ಯಾಣ್ ಅವರು ಸಂತಾಪ ಸೂಚಿಸಿದ್ದು, ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ತಿಳಿಸಿದ್ದಾರೆ.
ಶ್ರೀ @KicchaSudeep ಅವರ ಕುಟುಂಬಕ್ಕೆ ತೀವ್ರ ಸಂತಾಪಗಳು pic.twitter.com/YQ0RQUoVwf
— Deputy CMO, Andhra Pradesh (@APDeputyCMO) October 20, 2024
ಈ ಸುದ್ದಿಯನ್ನೂ ಓದಿ | Sudeep Mother passed away: ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ
ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್(Sudeep Mother passed away) ಅವರ ತಾಯಿ ಸರೋಜಾ ಅವರು ಭಾನುವಾರ ಮುಂಜಾನೆ ವಿಧಿವಶರಾಗಿದ್ದರು. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ. ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆ 5 ರಿಂದ 7 ರ ವರೆಗೆ ವಿಲ್ಸನ್ ಗಾರ್ಡನ್‌ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.