ಬೆಂಗಳೂರು: ಬ್ಯೂಟಿಷಿಯನ್ ಮೇಲೆ ಅತ್ಯಾಚಾರ (Physical Abuse) ಎಸಗಿದ ಆರೋಪದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬನನ್ನು ಜಿಲ್ಲೆಯ ಸಾತನೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸೊರನಹಳ್ಳಿ ಚೆಲುವರಾಮು (32) ಎಂದು ಗುರುತಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಂತ್ರಸ್ತೆಯು ಸಾತನೂರಿನಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು. ಬ್ಯಾಂಕ್ ಸಾಲಕ್ಕಾಗಿ ಎದುರು ನೋಡುತ್ತಿದ್ದ ಆಕೆ ಸ್ನೇಹಿತೆಯ ಮೂಲಕ ಆರೋಪಿಯ ಸಂಪರ್ಕಕ್ಕೆ ಬಂದಿದ್ದರು. ಆರೋಪಿ ತನ್ನ ಸಂಪರ್ಕಗಳ ಮೂಲಕ ಸಾಲ ಕೊಡಿಸುವುದಾಗಿ ಆಕೆಗೆ ಭರವಸೆ ನೀಡಿದ್ದ. ಇದೇ ಅವಕಾಶವನ್ನು ಬಳಸಿಕೊಂಡ ಆರೋಪಿ ಸಾಲ ಕೊಡಿಸುವ ನೆಪದಲ್ಲಿ ಆಕೆಯನ್ನು ರಾಮನಗರದ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಸಂತ್ರಸ್ತೆ ಸೋಮವಾರ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಗೆ ಆರೋಪಿಯನ್ನು ಪರಿಚಯಿಸುವಲ್ಲಿ ಪರಸ್ಪರ ಸ್ನೇಹಿತನ ಪಾತ್ರವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ವಿರುದ್ಧ ಅತ್ಯಾಚಾರ (ಬಿಎನ್‌ಎಸ್ 64), ಲೈಂಗಿಕ ಕಿರುಕುಳ (ಬಿಎನ್‌ಎಸ್ 75), ಮಹಿಳೆಯ ಮೇಲಿನ ದೌರ್ಜನ್ಯ (ಬಿಎನ್‌ಎಸ್ 76) ಜತೆಗೆ ಬಿಎನ್‌ಎಸ್‌ನ ಇತರ ವಿಭಾಗಗಳಲ್ಲಿ ದಾಖಲಿಸಲಾಗಿದೆ.
ಈ ಸುದ್ದಿಯನ್ನೂ ಓದಿ | K Annamalai: ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ- DMK ಸರ್ಕಾರದ ವಿರುದ್ಧ ವಿನೂತನ ಪ್ರೊಟೆಸ್ಟ್
ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿಕೆ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ (Hubballi news) ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Gas Cylinder Blast) ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ ಬೆನ್ನಲ್ಲೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿತ್ತು. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58) ಹಾಗೂ ಸಂಜಯ್ ಸವದತ್ತಿ (18) ಚಿಕಿತ್ಸೆ ಫಲಿಸದೇ ನಿನ್ನೆ ಸಾವನ್ನಪ್ಪಿದ್ದರು. ಇದೀಗ ರಾಜು ಕೃಷ್ಣ ಮುಗೇರಿ ಎಂಬಾತ ಮೃತಪಟ್ಟಿದ್ದಾರೆ. ಈತ ವಿದ್ಯಾನಗರ ಕಟ್ಟಿಮನಿ ಸ್ಕೂಲ್‌ನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿತ್ತು. ಗಾಯಾಳು ಅಯ್ಯಪ್ಪ ಭಕ್ತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವನ್ನಪ್ಪಿದ್ದಾರೆ.
ಪರಿಹಾರ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಿನ್ನೆ ಇಬ್ಬರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಮೃತ ನಿಜಲಿಂಗಪ್ಪ ಹಾಗೂ ಸಂಜಯ್ ಕುಟುಂಬದವರು ಇದನ್ನು ಪಡೆಯಲಿದ್ದಾರೆ. ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದ್ದು, ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರಿಸಿದ್ದರು. ಇನ್ನುಳಿದ ಆರು ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
ಇದನ್ನೂ ಓದಿ: Cylinder Blast: ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ