ಬೆಂಗಳೂರು: ಕಸ್ಟಮರ್ ಕೇರ್‌ನಲ್ಲಿ (Customer Care) ಪರಿಚಯವಾದ ಯುವತಿಯನ್ನು ಯುವಕನೊಬ್ಬ ಖಾಸಗಿ ಹೋಟೆಲ್‌ಗೆ ಕರೆದೊಯ್ದು ಅಮಲು ಪದಾರ್ಥ (Drugs) ನೀಡಿ ಲೈಂಗಿಕ ದೌರ್ಜನ್ಯ (Physical Abuse) ಎಸಗಿದ್ದಾನೆ. ಯುವತಿ ದೂರು (Bengaluru crime news) ನೀಡಿದ್ದು, ಯುವಕ ಪರಾರಿಯಾಗಿದ್ದಾನೆ.
ಆಂಧ್ರ ಪ್ರದೇಶ ಮೂಲದ ಲಕ್ಷ್ಮಿರೆಡ್ಡಿ ಎಂಬ ಯುವಕ, ಬೆಂಗಳೂರಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಯುವಕ ಫೋನ್ ಸ್ವಿಚ್‌ಆಫ್ ಮಾಡಿಕೊಂಡು ಪರಾರಿಯಾಗಿದ್ದು, ಪೊಲೀಸರು ತಲಾಶೆಯಲ್ಲಿದ್ದಾರೆ.
ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾಳೆ. 2019ರಲ್ಲಿ ಯುವತಿ ಕಸ್ಟಮರ್ ಕೇರ್‌ನಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ ಲಕ್ಷ್ಮಿರೆಡ್ಡಿ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವ ನೆಪದಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಕೆಲವು ದಿನಗಳ ನಂತರ ಅಕ್ಕನ ಬರ್ತ್‌ಡೇ ಇದೆ ಎಂದು ಖಾಸಗಿ ಹೋಟೆಲ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ವಿಡಿಯೋ ಮಾಡಿ ಯುವತಿಗೆ ಬೆದರಿಕೆ ಹಾಕಿದ್ದಾನೆ. ವಿಡಿಯೋ ತೋರಿಸಿ ಹಲವು ಬಾರಿ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ವಿಡಿಯೋ ಮಾಡಿರುವ ಯುವತಿ, ಲಕ್ಷ್ಮಿರೆಡ್ಡಿ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಜಾತಿನಿಂದನೆ ಮಾಡಿ ಹೀಯಾಳಿಸಿದ ಆರೋಪ ಮಾಡಿದ್ದಾರೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧವೂ ಆತ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆಕೆ ದೂರು ನೀಡುತ್ತಿದ್ದಂತೆ ಆರೋಪಿ ಲಕ್ಷ್ಮಿರೆಡ್ಡಿ ಪೋನ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಆಗಿದ್ದಾನೆ. ಆತನ ವಿರುದ್ಧ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉದ್ಯಮಿ ಮೇಲೆ ಗುಂಡಿನ ದಾಳಿ
ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ಶನಿವಾರ (ಡಿ. 7) ಬೆಳ್ಳಂಬೆಳಗ್ಗೆ ಶೂಟೌಟ್ ನಡೆದಿದ್ದು, ವಾಕಿಂಗ್ ಹೋಗುತ್ತಿದ್ದ 52 ವರ್ಷದ ಉದ್ಯಮಿಯೊಬ್ಬರು ಬಲಿಯಾಗಿದ್ದಾರೆ. ಮೃತರನ್ನು ಸುನಿಲ್ ಜೈನ್ (Sunil Jain) ಎಂದು ಗುರುತಿಸಲಾಗಿದೆ. ಪೂರ್ವ ದಿಲ್ಲಿಯ ಶಹದಾರಾದಲ್ಲಿ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಅವರ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ (Shot Dead).
ʼʼಉದ್ಯಮಿ ಸುನಿಲ್ ಜೈನ್ ಎಂದಿನಂತೆ ಯಮುನಾ ಸ್ಫೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ವಾಕಿಂಗ್ ಮಾಡಿ ಹಿಂದಿರುಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ಮಳೆಗೆರೆದಿದ್ದಾರೆʼʼ ಎಂದು ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ. ʼʼಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಸುನಿಲ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರುʼʼ ಎಂದು ಅವರು ವಿವರಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅವರಿಗೆ ಯಾರೂ ಶತ್ರುಗಳು ಇರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ: Chikkaballapur Breaking: ಬಾಲಮಂದಿರದ ಸಂತ್ರಸ್ಥರಿಗೆ ಕಿರುಕುಳದ ಆರೋಪ ಅಧೀಕ್ಷಕಿ ಮಮತಾ ವಿರುದ್ದ ದೂರು ದಾಖಲು