ಮೈಸೂರು: 2021ರಲ್ಲಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಗ್ಯಾಂಗ್ ರೇಪ್ (Physical Abuse) ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಇದೀಗ ಅಂತಹುದೇ ಹೇಯ ಕೃತ್ಯವೊಂದು ನಗರದಲ್ಲಿ ನಡೆದಿದ್ದು, ಯುವತಿಯ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಮೂಲದ ಯುವತಿಯ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಯುವತಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾಳೆ. ನೆನ್ನೆ ಮಡಿಕೇರಿಯಿಂದ ಬಂದು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದೆ. ಈ ವೇಳೆ ಜತೆಗೆ ಇದ್ದಂತಹ ಸ್ನೇಹಿತರೆ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
2021ರಲ್ಲಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ಹೊರವಲಯದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಪ್ರಕರಣದಲ್ಲಿ ಒಬ್ಬ ಬಾಲಾಪರಾಧಿ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಈ ಸುದ್ದಿಯನ್ನೂ ಓದಿ | Supreme Court: ಪಟಾಕಿ ಮೇಲಿನ ನಿಷೇಧದ ಆದೇಶ ಕಟ್ಟುನಿಟ್ಟಾಗಿ ಜಾರಿಗೊಳಿಸಿಲ್ಲವೇಕೆ? ದಿಲ್ಲಿ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್
ಡಬ್ಬದೊಳಗೆ ಪಟಾಕಿ ಹಚ್ಚಿ, ಸ್ನೇಹಿತನ ಬಲಿ ಪಡೆದ ಯುವಕರು; 6 ಮಂದಿ ಬಂಧನ
ಬೆಂಗಳೂರು: ಈ ಬಾರಿಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳಿಂದ (Firecracker accident) ನಗರದಲ್ಲಿ 145ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯಗಳಾಗಿರುವುದು ಕಂಡುಬಂದಿದೆ. ಈ ನಡುವೆ ಬೆಂಗಳೂರಿನಲ್ಲಿ ಪಟಾಕಿ ದುರಂತದಿಂದ ರಾಜ್ಯದಲ್ಲೇ ಮೊದಲ ಬಲಿಯಾಗಿರುವುದು ವರದಿಯಾಗಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಅವಘಡ ನಡೆದಿದ್ದು, ಯುವಕನ ಸಾವಿಗೆ ಕಾರಣರಾದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಬರೀಶ್ ಮೃತ ಯುವಕ. ದೀಪಾವಳಿ ಹಬ್ಬದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಡಬ್ಬದೊಳಗೆ ಪಟಾಕಿ ಹಚ್ಚುತ್ತೇವೆ, ಅದರ ಮೇಲೆ ನೀನು ಕುಳಿತುಕೋ ನೋಡೋಣ ಎಂದು ಶಬರೀಶ್‌ಗೆ ಸ್ನೇಹಿತರು ಚಾಲೆಂಜ್ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ಶಬರೀಶ್, ಪಟಾಕಿ ಹಚ್ಚಿದ್ದ ಡಬ್ಬದ ಮೇಲೆ ಕುಳಿತಿದ್ದ. ಈ ವೇಳೆ ಪಟಾಕಿ ಸ್ಫೋಟದ ತೀವ್ರತೆಗೆ ಶಬರೀಶ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ನ. 2ರಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.
ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.#Deepavali2024 #Firecrackers #bengaluru pic.twitter.com/pm1AuDCJlP
— Harshith Achrappady (@HAchrappady) November 4, 2024