Thursday, 24th October 2024

PM Narendra Modi: ಬೆಂಗಳೂರು ಕಟ್ಟಡ ದುರಂತ; ಪ್ರಧಾನಿ ಮೋದಿ ಪರಿಹಾರ ಘೋಷಣೆ

PM Narendra Modi

ನವದೆಹಲಿ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಈ ದುರಂತದಲ್ಲಿ ಗಾಯಗೊಂಡ ಗಾಯಗೊಂಡ ಕಾರ್ಮಿಕರಿಗೆ ಪ್ರಧಾನಿ ಅವರು ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ ಎಂದು ಹೇಳಿದ್ದಾರೆ.

ಕಟ್ಟಡ ದುರಂತಕ್ಕೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಅವಘಡದಲ್ಲಿ ಸಾವು-ನೋವು ಕಂಡ ಕುಟುಂಬಗಳ ನೆರವಿಗೆ ಸ್ಪಂದಿಸಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Indian economy: ಭಾರತ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಐಎಂಎಫ್‌

ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ, ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ್ಟ 8 ಕಾರ್ಮಿಕರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ 6 ಮಂದಿ ಗಾಯಾಳುಗಳಿಗೆ ತಲಾ 50,000 ರೂ. ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Rains: ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌, ರಸ್ತೆಯಲ್ಲೇ ಕಾರು ಬಿಟ್ಟು ಮನೆಗೆ ನಡೆದ ಜನ; ವಿಡಿಯೊ ಇದೆ

ಈ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದುಃಖ ಸಹಿಸಿಕೊಳ್ಳುವ ಚೈತನ್ಯವನ್ನು ದೇವರು ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಅವರು ಪ್ರಾರ್ಥಿಸಿದ್ದಾರೆ.