Sunday, 15th December 2024

POCSO Case: ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ 5000ಕ್ಕೂ ಹೆಚ್ಚು ನಗ್ನ ಫೋಟೋ ಸೆರೆಹಿಡಿದ ಶಿಕ್ಷಕನಿಗೆ ರಿಲೀಫ್‌ ಇಲ್ಲ

pocso case

ಕೋಲಾರ: ತನ್ನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳನ್ನು ಸೆರೆಹಿಡಿದ ಶಾಲಾ ಶಿಕ್ಷಕನ (Shocking news) ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣದ ಎಫ್ಐಆರ್ (POCSO Case) ರದ್ದತಿಗೆ ಹೈಕೋರ್ಟ್ (High Court) ನಿರಾಕರಿಸಿದೆ. ಕೋಲಾರ (Kolar news) ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಇರುವ ಈ ಚಿತ್ರಕಲಾ ಶಿಕ್ಷಕ, ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ (Physical Abuse) ಸೆರೆಹಿಡಿದಿದ್ದಾನೆ ಎಂಬ ಆರೋಪವಿದೆ.

ಪೋಕ್ಸೋ ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಎಂಬಾತನ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿ ಬಳಿ 5 ಮೊಬೈಲ್, ಸಾವಿರಾರು ವಿಡಿಯೋಗಳು ಪತ್ತೆಯಾಗಿದ್ದವು. ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಈತ ಅರ್ಜಿ ಸಲ್ಲಿಸಿದ್ದ. ಶಿಕ್ಷಕನ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ.

ಶಿಕ್ಷಕನ ಕೃತ್ಯ ನಿಜಕ್ಕೂ ಅಸಭ್ಯ ಹಾಗೂ ಭಯಾನಕವಾಗಿದೆ. ಇಂತಹ ಪ್ರಕರಣವನ್ನು ರದ್ದುಪಡಿಸಲಾಗದು ಎಂದು ಕೋರ್ಟ್‌ ಹೇಳಿದೆ. ಫೋಟೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಆಸಭ್ಯ ರೀತಿಯಲ್ಲಿ ಪ್ರದರ್ಶಿಸುವುದು ಲೈಂಗಿಕ ಕಿರುಕುಳವಾಗುತ್ತದೆ ಎಂದು ಹೇಳಿದೆ.

ಈ ಸುದ್ದಿ ಓದಿ: Actor Darshan: ರೇಣುಕಾಸ್ವಾಮಿ ಹೆಣದ ಹಿಂದಿನಿಂದ ದರ್ಶನ್, ಪವಿತ್ರ ಗೌಡ ಹೆಸರು ಎದ್ದು ಬಂದದ್ದು ಹೇಗೆ?