Sunday, 5th January 2025

Police Harassment: ಠಾಣೆಗೆ ಬಂದ ಮಹಿಳೆ ಮೇಲೆ ಡಿವೈಎಸ್‌ಪಿ ಲೈಂಗಿಕ ವಿಕೃತಿ, ವಿಡಿಯೋ ವೈರಲ್‌

police harassment

ತುಮಕೂರು: ಜಮೀನು ತಗಾದೆ ವಿಚಾರದಲ್ಲಿ ದೂರು ನೀಡಲು ಬಂದ ಮಹಿಳೆಯನ್ನು ತನ್ನ ಕಾಮಪಿಪಾಸೆ ತೀರಿಸಿಕೊಳ್ಳಲು ಪೊಲೀಸ್‌ ಅಧಿಕಾರಿ (Police Harassment) ಬಲವಂತಪಡಿಸಿದ ಘಟನೆ ಮಧುಗಿರಿಯಲ್ಲಿ ನಡೆದಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parameshwara) ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumkur News) ನಡೆದಿರುವ ಈ ಘಟನೆಯಿಂದಾಗಿ ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿದೆ.

ಜಮೀನು ತಗಾದೆ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಠಾಣೆಗೆ ಬಂದ ಮಹಿಳೆಯನ್ನು ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಶೌಚಾಲಯದ ಬಳಿ ಕರೆದುಕೊಂಡುಹೋಗಿ ತನ್ನ ಕಾಮಪಿಪಾಸೆ ತೀರಿಸಲು ಬಲವಂತಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸನ್ನಿವೇಶದಲ್ಲಿ ಅದನ್ನು ಠಾಣೆಯಲ್ಲಿದ್ದ ಸಾರ್ವಜನಿಕರೊಬ್ಬರು ಶೌಚಾಲಯದ ಗೋಡೆಯ ಈಚೆಯಿಂದ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ತುಮಕೂರಿನ ಎಲ್ಲೆಡೆ ಹರಿದಾಡುತ್ತಿದೆ. ಪೊಲೀಸ್‌ ಇಲಾಖೆ ಈ ಬಗ್ಗೆ ಕಠಿಣ ಶಿಸ್ತುಕ್ರಮಕ್ಕೆ ಮುಂದಾಗಿದೆ. ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಕುರಿತು ವಿಚಾರಿಸಲು ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಜೊತೆ ಡಿವೈಎಸ್‌ಪಿ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಇದನ್ನೂ ಓದಿ: Viral News: ಥಿಯೇಟರ್‌ಗೆ ಪೊಲೀಸ್‌ ಎಂಟ್ರಿ; ಪುಷ್ಪ-2 ಕ್ಲೈಮ್ಯಾಕ್ಸ್‌ ನೋಡ್ತಾ ಮಜಾ ಮಾಡ್ತಿದ್ದ ಗ್ಯಾಂಗ್‌ಸ್ಟರ್‌ ಬಲೆಗೆ