ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 4115 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ (Police Recruitment) ಆರಂಭಿಸಲಾಗುತ್ತದೆ.
3500 ಕಾನ್ಸ್ಟೇಬಲ್ ಹಾಗೂ 615 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, 3 ತಿಂಗಳಿನಲ್ಲಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ವರ್ಷ ಪೂರ್ಣಗೊಂಡಿರಬೇಕು. 25 ವರ್ಷ ಮೀರಿರಬಾರದು.
2023-24ನೇ ಸಾಲಿನ ಹಾಗೂ 2022-23 ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ, ಪ್ರಸ್ತಾವನೆ ಸಲ್ಲಿಸಲಾಗಿರುವ ಹುದ್ದೆಗಳು ಇವಾಗಿದ್ದು, ಮುಂದಿನ 3 ತಿಂಗಳೊಳಗೆ ಅಧಿಸೂಚನೆ ಬಿಡುಗಡೆ ಮಾಡುವ ಸಾಧ್ಯತೆಗಳು ಇವೆ. ಆದರೆ ನೇಮಕಾತಿ ಆದೇಶ ಗೃಹ ಇಲಾಖೆಯಿಂದ ಶೀಘ್ರ ಬಂದಲ್ಲಿ 40 ದಿನಗಳೊಳಗೆ ಸಹ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ | Justice Sanjiv Khanna: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನ. 11ರಂದು ಅಧಿಕಾರ ಸ್ವೀಕಾರ
ಪವರ್ ಗ್ರಿಡ್ ಕಾರ್ಪೋರೇಷನ್ನಲ್ಲಿದೆ 802 ಹುದ್ದೆ; ಡಿಪ್ಲೊಮಾ ವಿದ್ಯಾರ್ಹತೆಯವರು ಅರ್ಜಿ ಸಲ್ಲಿಸಿ
ಬೆಂಗಳೂರು: ಇಂಧನ ಸಚಿವಾಲಯ (Ministry of power)ದ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ (Power Grid Corporation of India) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾ ಟ್ರೈನಿ, ಅಸಿಸ್ಟಂಟ್ ಹುದ್ದೆಗಳು ಇದಾಗಿದೆ. ಒಟ್ಟು 802 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪಿಜಿಸಿಐಎಲ್ ಪ್ರಕಟಣೆಯಲ್ಲಿ ತಿಳಿಸಿದೆ (PGCIL Recruitment 2024). ದೇಶದ ಎಲ್ಲಿ ಬೇಕಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ನವೆಂಬರ್ 12 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್)- 600 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ, ಬಿಇ/ಬಿ.ಟೆಕ್, ಎಂಇ/ಎಂ.ಟೆಕ್
ಡಿಪ್ಲೊಮಾ ಟ್ರೈನಿ (ಸಿವಿಲ್)- 66 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ, ಬಿಇ/ಬಿ.ಟೆಕ್, ಎಂಇ/ಎಂ.ಟೆಕ್
ಜೂನಿಯರ್ ಆಫೀಸರ್ ಟ್ರೈನಿ (ಎಚ್ಆರ್)- 79 ಹುದ್ದೆ, ವಿದ್ಯಾರ್ಹತೆ: ವಿದ್ಯಾರ್ಹತೆ: ಪದವಿ, ಬಿಬಿಎ/ಬಿಬಿಎಂ/ಬಿಸಬಿಎಸ್, ಪಿಜಿ ಪದವಿ/ಡಿಪ್ಲೊಮಾ
ಜೂನಿಯರ್ ಆಫೀಸರ್ ಟ್ರೈನಿ (ಎಫ್ & ಎ)- 35 ಹುದ್ದೆ, ವಿದ್ಯಾರ್ಹತೆ: ಸಿಎ/ಸಿಎಂಎ
ಅಸಿಸ್ಟೆಂಟ್ ಟ್ರೈನಿ (ಎಫ್ & ಎ)- 22 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ, ಸಿಎ/ಸಿಎಂಎ, ಪಿಜಿ ಪದವಿ/ಡಿಪ್ಲೊಮಾ
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್ (ಅಸಿಸ್ಟಂಟ್ ಟ್ರೈನಿ) ಅಭ್ಯರ್ಥಿಗಳು 200 ರೂ., ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್ (ಇತರ ಹುದ್ದೆ) 300 ರೂ. ಪಾವತಿಸಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯುದಿ, ಇಎಸ್ಎಂ ಅಭ್ಯರ್ಥಿಗಳು ಅರ್ಜಿ ಸುಲ್ಕ ಪಾವತಿಸಬೇಕಾಗಿಲ್ಲ. ಅರ್ಜಿ ಶುಲ್ಕ ಪಾವತಿ ವಿಧಾನ: ಆನ್ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ, ಕಂಪ್ಯೂಟರ್ ಸ್ಕಿಲ್ ಟೆಸ್ಟ್, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಹುದ್ದೆಗಳಿಗೆ ಅನುಗುಣವಾಗಿ 21,500 ರೂ. – 1,17,500 ರೂ. ಮಾಸಿಕ ವೇತನ ದೊರೆಯಲಿದೆ.
PGCIL Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://careers.powergrid.in/recruitment-nextgen/h/login.aspx)
- ಮೊದಲು ಹೆಸರು ನೋಂದಾಯಿಸಿ.
- ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಸರಿಯಾದ ಅಳತೆಯಲ್ಲಿ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್ ಫಾರಂ ಡೌನ್ಲೋಡ್ ಮಾಡಿಟ್ಟುಕೊಳ್ಳಿ.
ಈ ಸುದ್ದಿಯನ್ನೂ ಓದಿ: UPSC Recruitment 2024: ಯುಪಿಎಸ್ಸಿಯ 457 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ