Friday, 22nd November 2024

ಅ.20, 21, 22ರಂದು ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಉತ್ತರ ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಗಾಳಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ. 22 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅ. 20 ಮತ್ತು 21ರಂದು ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಂಗಳವಾರ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ,  ಬುಧವಾರ ಬೀದರ್‌, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 22 ರಂದು ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.