Friday, 13th December 2024

Cheating case: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ; ಪ್ರಲ್ಹಾದ್‌ ಜೋಶಿ ಸಹೋದರ ಅರೆಸ್ಟ್‌

Gopal Joshi

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 2.25 ಕೋಟಿ ರೂ. ಪಡೆದು, ವಂಚಿಸಿರುವ ಆರೋಪದಲ್ಲಿ (Cheating case) ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರ ಸಹೋದರ ಗೋಪಾಲ್​ ಜೋಶಿ (Gopal Joshi) ಅವರನ್ನು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಎಸಿಪಿ ಚಂದನ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ಪೊಲೀಸರು, ಗೋಪಾಲ್‌ ಜೋಶಿ ಅವರನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ ಬಳಿಕ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿನ ಗೋಪಾಲ ಜೋಶಿ ಅವರ ಮನೆಗೆ ಕರೆದೊಯ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದೂರುದಾರೆ ಸುನೀತಾ ಚೌಹ್ವಾಣ್ ಸಹ ಕೇಶ್ವಾಪುರ ಠಾಣೆಗೆ ತೆರಳಿದ್ದು, ಅವರಿಂದ ಪೊಲೀಸರು ಹೇಳಿಕೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Pralhad Joshi: ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ: ಜೋಶಿ

ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್ ಅವರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ​ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಗೋಪಾಲ್ ಜೋಶಿ, ವಿಜಯಲಕ್ಷ್ಮೀ ಹಾಗೂ ಅಜಯ್ ಜೋಶಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕೇಸ್‌ ದಾಖಲಾದ ಬೆನ್ನಲ್ಲೇ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು. ಹೀಗಾಗಿ ಅವರಿಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.