Thursday, 12th December 2024

ಕಾಂಗ್ರೆಸ್ ಪಕ್ಷಕ್ಕೆ ಪ್ರಮೋದ್ ಮಧ್ವರಾಜ್ ಗುಡ್‌ ಬೈ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಗುಡ್ ಬೈ ಹೇಳಿದ್ದಾರೆ.

ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ, ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಆಡಳಿತದ ಅವಧಿಯಲ್ಲಿ, ಪ್ರಮೋದ್ ಮಧ್ವರಾಜ್ ಕ್ರೀಡಾ ಸಚಿವರಾಗಿದ್ದರು. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.