ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ (Social Welfare Department) ವತಿಯಿಂದ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್‌ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ (Prize Money) ಆನ್‌ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://swdservices.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಈ ಸುದ್ದಿಯನ್ನೂ ಓದಿ | Bengaluru News: ಗಮನಿಸಿ, ವಿವಿಧ ಯೋಜನೆಯಡಿ ಸಹಾಯಧನ, ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲೂಕು ಯಲಹಂಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ-560064 ಅಥವಾ ದೂರವಾಣಿ ಸಂಖ್ಯೆ: 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.