Monday, 6th January 2025

Prize Money: ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Prize Money

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25 ನೇ ಸಾಲಿನ ಪ್ರೋತ್ಸಾಹಧನವನ್ನು 2023-24 ನೇ ಸಾಲಿನಲ್ಲಿ ಸರ್ಕಾರ / ಸರ್ಕಾರದಿಂದ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಯಿಂದ ಸಂಘಟಿಸಲಾದ ರಾಷ್ಟ್ರ ಅಥವಾ ಅಂತಾರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಪದಕ ವಿಜೇತರಾದ ಬೆಂಗಳೂರು ನಗರ ಜಿಲ್ಲೆಯ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ (Prize Money) ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅವಧಿಯನ್ನು ಜನವರಿ 07, 2025ರ ವರೆಗೆ ವಿಸ್ತರಿಸಲಾಗಿದೆ.

(ದಿನಾಂಕ: 01.04.2023 ರಿಂದ 31.03.2024) 2023-24ನೇ ಸಾಲಿನ ಕ್ರೀಡಾ ಸಾಧನೆ ದಾಖಲಿಸಿದ ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಕೊಠಡಿ ಸಂಖ್ಯೆ: 17-18, ಶ್ರೀ ಕಂಠೀರವ ಕ್ರೀಡಾ ಸಂಕೀರ್ಣ, ಕಸ್ತೂರಬಾ ರಸ್ತೆ, ಬೆಂಗಳೂರು-560 001 ಇಲ್ಲಿಗೆ ಜನವರಿ 07 ರೊಳಗೆ ಖುದ್ದಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನೂ ಓದಿ | IPPB Recruitment 2025: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ವಿವಿಧ ಹುದ್ದೆ; ಇಂದೇ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22239771 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.