Monday, 16th September 2024

ಕೆಎಸ್ಆರ್ಟಿಸಿ ನೌಕರರು, ಕುಟುಂಬದವರಿಂದ ವಿನೂತನ ಪ್ರತಿಭಟನೆ

ಪಾವಗಡ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಉದ್ದೇಶದಿಂದ ನಾಲ್ಕು ಕೆ.ಎಸ್.ಆರ್.ಟಿ.ಸಿ.ಸಿಬ್ಬಂದಿಗಳಿಗೆ ರಾಮನಗರ ಘಟಕಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

6ನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ತಾಲೂಕು ಆಡಳಿತ ಕಚೇರಿ ಮುಂದೆ ಕೆಎಸ್ಆರ್ ಟಿಸಿ ನೌಕರರು ಮತ್ತು ಕುಟುಂಬದ ಸದಸ್ಯರು ತಟ್ಟೆ ಲೋಟ ಹೊಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಂತರ ಪ್ರತಿಭಟನಾಕಾರರು ತಹಸೀಲ್ದಾರ ನಾಗರಾಜುರವರಿಗೆ ಮನವಿ‌ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಅವರು, ಹಲವು ದಿನಗಳಿಂದ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರವು ಪ್ರತಿಭಟನೆಗೆ ಪ್ರತಿಕ್ರಿಯಿಸಿಲ್ಲ. ಜೊತೆ ನೌಕರರನ್ನು ವರ್ಗಾವಣೆ ಹಾಗೂ ಎಸ್ಮಾ ಅಸ್ತ್ರಗಳನ್ನು ಪ್ರಯೋಗಿಸುವ ಮೂಲಕ ಪ್ರತಿಭಟನಾಕಾರರಿಗೆ ಬೆದರಿಸುತ್ತಿದೆ.

ನಾವು ನ್ಯಾಯಯುತ ಬೇಡಿಕೆಗಳಿಗೆ ಕೇಳುತ್ತಿದ್ದೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು. ಆರನೇ ವೇತನ ಆಯೋಗವನ್ನು ಸರ್ಕಾರವು ಆದಷ್ಟು ಬೇಗ ಜಾರಿಗೊಳಿಸ ಬೇಕು ಎಂದು ಆಗ್ರಹಿಸಿದರು. ಮಾರ್ಚ್ -ಏಪ್ರಿಲ್ ತಿಂಗಳ ವೇತನ ವಿಲ್ಲದೇ ನೌಕರರ ಕುಟುಂಬಗಳು ಪರದಾಡುವಂತಾಗಿದೆ.

ಯುಗಾದಿ ಹಬ್ಬಕ್ಕೆ ಮಕ್ಕಳಿಗೆ ಬಟ್ಟೆ ಮನೆಗೆ ದಿನಸಿ ವಸ್ತುಗಳನ್ನು ತರಲಾಗದ ಸ್ಥಿತಿಯಲ್ಲಿದ್ದೇವೆ ಎಂದು ನೌಕರರು ತಮ್ಮ ನೋವನ್ನು ತೋಡಿಕೊಂಡರು. ಈಗಾಗಲೇ ವಿವಿಧ ರಾಜ್ಯಗಳಲ್ಲಿ ನೌಕರರನ್ನು ಸರ್ಕಾರಿ ‌ನೌಕರರೆಂದು ಸರಕಾರವು ಪರಿಗಣಿಸಿದೆ. ಆದರೆ ರಾಜ್ಯ ಸರ್ಕಾರವು ಇದುವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.

ರಾಜ್ಯಗಳು ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿದಾಗ ರಾಜ್ಯ ಸರ್ಕಾರವು ತೀರ್ಮಾನ ಕೈಗೊಳ್ಳಬೇಕು. ಜತೆ ನೌಕರರ ಪ್ರಮುಖ ಬೇಡಿಕೆಗಳನ್ನು ಆದಷ್ಟು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Leave a Reply

Your email address will not be published. Required fields are marked *