Friday, 13th December 2024

PSI Exam: ಪಿಎಸ್‌ಐ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್‌; ಚಳಿಗಾಲ ಅಧಿವೇಶನದ ಬಳಿಕ ನೇಮಕಾತಿ ಆದೇಶ ಪತ್ರ

PSI Exam

ಬೆಳಗಾವಿ: ಪಿಎಸ್‌ಐ ಅಭ್ಯರ್ಥಿಗಳಿಗೆ (PSI Exam) ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ನೇಮಕಾತಿ ಆದೇಶ ಪತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಚಳಿಗಾಲದ ಅಧಿವೇಶನ ಮುಗಿದ ಬಳಿಕ ಆದೇಶ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್ ಅವರು, ಈ ಹಿಂದೆ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಹಗರಣ ನಡೆದಿತ್ತು. ಮರುಪರೀಕ್ಷೆ ಮಾಡಿ ಈಗ ವೆರಿಫಿಕೇಷನ್ ಮಾಡಲಾಗುತ್ತಿದೆ. ಅಧಿವೇಶನದ ಬಳಿಕ ಆಯ್ಕೆಯಾದ ಪಿಎಸ್‌ಐಗಳಿಗೆ ಆದೇಶ ಪತ್ರ ನೀಡಲಾಗುವುದು. ಹೊಸದಾಗಿ ಇನ್ನೂ 402 ಪಿಎಸ್‌ಐ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಹಿಂಡಲಗಾ ಜೈಲಿನ ಕೈದಿಗಳ ಮದ್ಯ ಸೇವನೆ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದು 2022ರ ವಿಡಿಯೊ, ಅದನ್ನು ಈಗ ಮತ್ತೆ ಹಾಕಿದ್ದಾರೆ. ಜೈಲುಗಳಲ್ಲಿ 5ಜಿ ಜಾಮ‌ರ್ ಹಾಕಲಾಗುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Bengaluru techie Case: ಪ್ರಕರಣ ಇತ್ಯರ್ಥಕ್ಕೆ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ ನ್ಯಾಯಾಧೀಶರು: ಅತುಲ್‌ ತಂದೆಯಿಂದ ಆಕ್ರೋಶ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಕಾದಿದೆ ಶಾಕ್, ಹೊಸ ವರ್ಷದಿಂದ ಟಿಕೆಟ್ ದರ ಏರಿಕೆ

ಬೆಂಗಳೂರು: ರಾಜಧಾನಿಯ (Bengaluru News) ಜೀವನಾಡಿಯಾಗಿರುವ ನಮ್ಮ ಮೆಟ್ರೋದ (Namma Metro) ಪ್ರಯಾಣ ದರಗಳು ಹೊಸ ವರ್ಷದಿಂದ ಏರಿಕೆಯಾಗಲಿವೆ ಎಂದು ತಿಳಿದುಬಂದಿದೆ. ಟಿಕೆಟ್‌ ದರ (Ticket Price hike) ಹೆಚ್ಚಳದ ಕುರಿತು ರಚಿಸಲಾಗಿರುವ ಸಮಿತಿ ಈ ವಾರದಲ್ಲಿ ಈ ಕುರಿತು ತನ್ನ ವರದಿ ಸಲ್ಲಿಸಲಿದೆ.

ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಪರಾಮರ್ಶೆ ನಡೆಸಲು ಬಿಎಂಆರ್​ಸಿಎಲ್ (BMRCL) ಸಮಿತಿ ರಚನೆ ಮಾಡಿತ್ತು. ಇತ್ತೀಚಿಗೆ ಬಿಎಂಆರ್‌ಸಿಎಲ್ ಮಾಹಿತಿಯ ಪ್ರಕಾರ ಕೇವಲ ಒಂದೇ ದಿನದಲ್ಲಿ 9 ಲಕ್ಷಕ್ಕೂ ಅಧಿಕ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ವಹಣಾ ವೆಚ್ಚ ಕೂಡ ಹೆಚ್ಚಾಗಿದೆ. ಹೀಗಾಗಿ ಹೊಸ ವರ್ಷದ ಆರಂಭದಿಂದ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಅಕ್ಟೋಬರ್ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಈ ತಿಂಗಳ 3ನೇ ವಾರದಲ್ಲಿ ಬಿಎಂಆರ್​ಸಿಎಲ್​ಗೆ ಸಲ್ಲಿಸಲಿದೆ. ವರದಿಯನ್ನು ಡಿಸೆಂಬರ್ ಕೊನೆಯ ವಾರದಲ್ಲಿ ಬಿಎಂಆರ್​ಸಿಎಲ್ ಸರ್ಕಾರಕ್ಕೆ ಸಲ್ಲಿಸಲಿದೆ.

ಮೆಟ್ರೋ ಟಿಕೆಟ್ ದರ ಶೇ 15ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದಲ್ಲಿ ಜನವರಿಯಿಂದ ದರ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ಕನಿಷ್ಠ 10 ರೂ. ಗರಿಷ್ಠ 60 ರೂ. ಪ್ರಯಾಣ ದರ ನಿಗದಿ ಮಾಡಲಾಗಿದೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಕಾರಣದಿಂದ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ. ಅಕ್ಟೋಬರ್ 3ರಿಂದ ಅ.28ರವರೆಗೆ ಬಿಎಂಆರ್​ಸಿಎಲ್ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ 2026ರ ಡಿಸೆಂಬರ್‌ಗೆ