ಬೆಂಗಳೂರು: ಪಿಎಸ್‌ಐ ಪರೀಕ್ಷೆಯ (PSI Exam) ತಾತ್ಕಾಲಿಕ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಪತ್ರಿಕೆ-1 ಮತ್ತು 2ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ವಿವರ ಇರುವ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಅ. 3ರಂದು ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ನ. 9ರ ಸಂಜೆ 5.30 ವರೆಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಬೇರೆ ಯಾವುದೇ ಇತರೆ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದೆ.
#PSI ಪರೀಕ್ಷೆಯ ಪತ್ರಿಕೆ -1 & 2ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ವಿವರ ಇರುವ ತಾತ್ಕಾಲಿಕ ಅಂಕಪಟ್ಟಿಯನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಇದ್ದರೆ ನ.9ರೊಳಗೆ ಸಲ್ಲಿಸಬಹುದು. ಅಂತಿಮ ಕೀ ಉತ್ತರ ಕೂಡ ಬಿಡುಗಡೆ ಮಾಡಲಾಗಿದೆ.@CMofKarnataka @drmcsudhakar pic.twitter.com/pUa4XTs3RK
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) November 6, 2024
ನ. 6ರಂದು ಪ್ರಕಟಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾತ್ರ ಲಿಂಕ್ ಮೂಲಕ ಸಲ್ಲಿಸಬೇಕು. ಈಗಾಗಲೇ ಕೀ ಉತ್ತರಗಳನ್ನು ಅಂತಿಮಗೊಳಿಸಿದ್ದು, ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕೆಇಎ ತಿಳಿಸಿದೆ.
ಪಿಎಸ್‌ಐ ಪರೀಕ್ಷೆ ತಾತ್ಕಾಲಿಕ ಅಂಕಪಟ್ಟಿಗಾಗಿ ಕೆಇಎ ವೆಬ್‌ಸೈಟ್‌ನ https://cetonline.karnataka.gov.in/vaoresult/resultdescomr.aspx ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ | Job Guide: 10, 12ನೇ ತರಗತಿ ವಿದ್ಯಾರ್ಹತೆ ಹೊಂದಿದವರಿಗೆ ಗುಡ್‌ನ್ಯೂಸ್; ಯುರೇನಿಯಂ ಕಾರ್ಪೋರೇಷನ್‌ನಲ್ಲಿದೆ 115 ಹುದ್ದೆ
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಕರೆದಿರುವ (KPSC Recruitment 2024) ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ (KPSC Jobs) ಅರ್ಜಿ ಸಲ್ಲಿಸಲು ಡೆಡ್‌ಲೈನ್ ವಿಸ್ತರಣೆ ಮಾಡಲಾಗಿದ್ದು, ನವೆಂಬರ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ನವೆಂಬರ್ 5, 2024ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ನವೆಂಬರ್ 5, 2024ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆ ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್
ಒಟ್ಟು ಹುದ್ದೆ 76
ವಿದ್ಯಾರ್ಹತೆ ಬಿ.ಟೆಕ್
ವೇತನ ಮಾಸಿಕ ₹ 33,450- 62,600
ಉದ್ಯೋಗದ ಸ್ಥಳ ಕರ್ನಾಟಕ
ಹುದ್ದೆಯ ಮಾಹಿತಿ:
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ (RPC)- 70
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ (HK)- 6
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ SSLC, ಡಿಪ್ಲೊಮಾ, ಆಟೋಮೊಬೈಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಇಲ್ಲಿ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 5/11/ 2024
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 20, 2024