Friday, 29th November 2024

CM Siddaramaiah: ಉಪಚುನಾವಣೆಯಲ್ಲಿ ಗೆಲುವು; ಸಿಎಂಗೆ ರಾಹುಲ್‌, ಪ್ರಿಯಾಂಕ ಅಭಿನಂದನೆ

cm siddaramaiah rahul gandhi priyanka gandhi

ಬೆಂಗಳೂರು: ರಾಜ್ಯ ಉಪಚುನಾವಣೆಯಲ್ಲಿ (Karnataka bypoll results 2024) ಮೂರೂ ವಿಧಾನಸಭೆ ಕ್ಷೇತ್ರಗಳಲ್ಲಿ (Vidhana sabha) ಕಾಂಗ್ರೆಸ್ (Congress) ಭರ್ಜರಿ ಗೆಲುವು ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ಅಭಿನಂದಿಸಿದರು.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ಮುಖಂಡರಾದ ರಾಹುಲ್ ಗಾಂಧಿ (Rahul Gandhi) ಹಾಗೂ ಪ್ರಿಯಾಂಕ ಗಾಂಧಿ (Priyanka Gandhi) ಅವರನ್ನು ಭೇಟಿಯಾದರು. ಇದೇ ಸಂದರ್ಭದಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಪ್ರಿಯಾಂಕಾ ಗಾಂಧಿ ಅವರ ಗೆಲುವಿಗೆ ಸಿಎಂ‌ ಸಿದ್ದರಾಮಯ್ಯ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಚಿವ ಕೆ.ಜೆ ಜಾರ್ಜ್‌ ಕೂಡ ಜೊತೆಗಿದ್ದರು.

ಮುಖ್ಯಮಂತ್ರಿಗಳು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್‌ನ ಮುಂದಿನ ನಡೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಫೀಡ್‌ಬ್ಯಾಕ್‌ ನೀಡಲಾಗಿದೆ. ಸಚಿವ ಸಂಪುಟದಲ್ಲಿ ಬದಲಾವಣೆಯ ಕುರಿತು ಮಾತನಾಡಲಾಗಿದ್ದು, ಈ ಬಗ್ಗೆ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ. ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸಹ ದೆಹಲಿಯಲ್ಲಿದ್ದು, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಹೈಕಮಾಂಡ್‌ ಜೊತೆಗೆ ಚರ್ಚೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಶಾಸಕ ಜಿ.ಟಿ.ದೇವೇಗೌಡ ಮಾತು ಸತ್ಯಕ್ಕೆ ಜಯ ಸಿಗಲಿದೆ ಎಂಬುದಕ್ಕೆ ಸಾಕ್ಷಿ: ಸಿದ್ದರಾಮಯ್ಯ